ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಕೊರೊನಾ ಸೋಂಕು ಪತ್ತೆಯಾಗದ ಒಂದೇ ಒಂದು ಪ್ರದೇಶ 'ಲಕ್ಷದ್ವೀಪ'

Last Updated 25 ಮೇ 2020, 10:41 IST
ಅಕ್ಷರ ಗಾತ್ರ

ನವದೆಹಲಿ: ಜೀವವೈವಿದ್ಯತೆಯಿಂದ ಶ್ರೀಮಂತವಾಗಿರುವ ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪದಲ್ಲಿ ಇಲ್ಲಿಯವರೆಗೂ ಕೊರೊನಾ ವೈರಸ್ ಸೋಂಕು ಪತ್ತೆಯಾಗಿಲ್ಲ.

ಭಾರತದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು ಸುಮಾರು 1.38 ಲಕ್ಷ ಜನರಿಗೆ ಸೋಂಕು ತಗುಲಿದೆ. ಆದರೆ ಲಕ್ಷದ್ವೀಪದಲ್ಲಿ ಇಲ್ಲಿಯವರೆಗೂ ಕೊರೊನಾ ಸೋಂಕು ಪತ್ತೆಯಾಗಿಲ್ಲ. 35 ಸಣ್ಣ ಸಣ್ಣ ದ್ವೀಪಗಳಿರುವ ಲಕ್ಷದ್ವೀಪ 64 ಸಾವಿರ ಜನಸಂಖ್ಯೆಯನ್ನು ಹೊಂದಿದೆ. ಕೇರಳ ರಾಜ್ಯದ ಕರಾವಳಿ ತೀರಕ್ಕೆ ಲಕ್ಷದ್ವೀಪ ಹೊಂದಿಕೊಂಡಿದ್ದು ವ್ಯವಹಾರಿಕವಾಗಿ ದಕ್ಷಿಣ ರಾಜ್ಯಗಳನ್ನು ಅವಲಂಭಿಸಿದೆ.

ಸೋಮವಾರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ ಲಕ್ಷದ್ವೀಪದಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ವರದಿಯಾಗಿದೆ. ಈಶಾನ್ಯ ರಾಜ್ಯಗಳ ಪೈಕಿ ನಾಗಲ್ಯಾಂಡ್‌ ರಾಜ್ಯದಲ್ಲಿ ನಿನ್ನೆಯ ವರೆಗೂ ಯಾವುದೇ ಸೋಂಕು ಪತ್ತೆಯಾಗಿರಲಿಲ್ಲ. ಆದರೆ ಇಂದು ಮೂವರಿಗೆ ಸೋಂಕು ವಕ್ಕರಿಸಿದೆ. ಚೆನ್ನೈನಿಂದ ಶ್ರಮಿಕ್‌ ರೈಲಿನಲ್ಲಿ ಪ್ರಯಾಣ ಮಾಡಿರುವ ಹಿನ್ನೆಲೆ ಹೊಂದಿರುವಮೂವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಅರುಣಾಚಲ ಪ್ರದೇಶರಾಜ್ಯ ಮಾತ್ರ ದೇಶದಲ್ಲಿ ಸೋಂಕು ಮುಕ್ತವಾದ ಮೊದಲ ರಾಜ್ಯವಾಗಿದೆ. ಕಳೆದ ಏಪ್ರಿಲ್‌ ತಿಂಗಳಲ್ಲಿ ಒಬ್ಬರಿಗೆ ಸೋಂಕು ತಗುಲಿತ್ತು. ಅವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೂ ಯಾವುದೇ ಹೊಸ ಸೋಂಕು ಪತ್ತೆಯಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT