ಗುರುವಾರ , ಫೆಬ್ರವರಿ 20, 2020
22 °C

ಲಾಲೂ ಪ್ರಸಾದ್‌ಗೆ ‘ಸುಪ್ರೀಂ’ ನೋಟಿಸ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲೂ ಪ್ರಸಾದ್‌ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ನೋಟಿಸ್‌ ನೀಡಿದೆ. 

ಮೇವು ಹಗರಣದ ಪ್ರಕರಣದ ಆರೋಪಿ ಲಾಲೂ ಪ್ರಸಾದ್‌ಗೆ ಜಾರ್ಖಂಡ್‌ ಹೈಕೋರ್ಟ್‌ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎಸ್‌.ಎ. ಬೊಬಡೆ, ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಹಾಗೂ ಸೂರ್ಯಕಾಂತ್‌ ಅವರಿದ್ದ ನ್ಯಾಯಪೀಠವು, ಈ ಕುರಿತು ಪ್ರತಿಕ್ರಿಯಿಸಲು ಲಾಲೂ ಅವರಿಗೆ ನೋಟಿಸ್‌ ಜಾರಿಗೊಳಿಸಿದೆ.

ದಿಯೋಘರ್‌ ಖಜಾನೆಯಿಂದ ಅಕ್ರಮವಾಗಿ ₹89.27 ಲಕ್ಷ ಪಡೆದ ಪ್ರಕರಣದಲ್ಲಿ ಹೈಕೋರ್ಟ್‌ ಯಾದವ್‌ಗೆ ಜಾಮೀನು ನೀಡಿತ್ತು. ಹೈಕೋರ್ಟ್‌ ತೀರ್ಪು ಪ್ರಶ್ನಿಸಿ 2019 ಜು.12ರಂದು ಸಿಬಿಐ ಅರ್ಜಿ ಸಲ್ಲಿಸಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು