ಬುಧವಾರ, ಜೂಲೈ 8, 2020
28 °C

ಅಸ್ಸಾಂನಲ್ಲಿ ಭಾರಿ ಮಳೆ, ಭೂಕುಸಿತ: 20 ಸಾವು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Landslide in Assam

ದಿಸ್‌ಪುರ: ದಕ್ಷಿಣ ಅಸ್ಸಾಂನಲ್ಲಿ ಭಾರಿ ಮಳೆ, ಭೂಕುಸಿತ ಸಂಭವಿಸಿ ಮಹಿಳೆಯರು, ಮಕ್ಕಳು ಸೇರಿದಂತೆ ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ.

ಕಛಾರ್, ಕರೀಮ್‌ಗಂಜ್ ಮತ್ತು ಹೈಲಾಕಂಡಿ ಜಿಲ್ಲೆಗಳಲ್ಲಿ ಮಂಗಳವಾರ ನಸುಕಿನಲ್ಲಿ ಮಳೆಯಾಗಿದ್ದು ಭೂಕುಸಿತ ಸಂಭವಿಸಿದೆ. ಕಛಾರ್ ಜಿಲ್ಲೆಯ ಕೋಲಾಪುರ್ ಗ್ರಾಮದಲ್ಲಿ ಬೆಳಿಗ್ಗೆ ಸುಮಾರು ಐದು ಗಂಟೆ ವೇಳೆಗೆ ಸಂಭವಿಸಿದ ಭೂಕುಸಿತದಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: 

ಸಮೀಪದ ಕರೀಮ್‌ಗಂಜ್ ಜಿಲ್ಲೆಯ ಮೋಹನ್‌ಪುರ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಏಳು ಮಂದಿ ಸಾವಿಗೀಡಾಗಿದ್ದಾರೆ. ಹೈಲಾಕಂಡಿಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಆರು ಮಂದಿ ಮೃತಪಟ್ಟಿರುವ ಬಗ್ಗೆ ಶಂಕಿಸಲಾಗಿದೆ. ಮನೆ ಮೇಲೆ ಭೂಕುಸಿತವಾದಾಗ ಇವರೆಲ್ಲ ನಿದ್ರಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು