ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

Last Updated 11 ನವೆಂಬರ್ 2019, 12:11 IST
ಅಕ್ಷರ ಗಾತ್ರ

ಮುಂಬೈ:ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಖ್ಯಾತ ಹಿನ್ನೆಲೆ ಗಾಯಕಿ ಲತಾ ಮಂಗೇಶ್ಕರ್ ಅವರನ್ನು ಸೋಮವಾರ ನಸುಕಿನ ಜಾವ ಇಲ್ಲಿನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ಐಸಿಯು) ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಹಿಂದಿಯೊಂದರಲ್ಲೇ 1,000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿರುವಲತಾ ಮಂಗೇಶ್ಕರ್ 2001ರಲ್ಲಿ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಭಾರತ ರತ್ನಕ್ಕೆ ಪಾತ್ರರಾಗಿದ್ದಾರೆ.

1942ರಲ್ಲಿ ಮರಾಠಿಯಲ್ಲಿ ಹಾಡಲು ಪ್ರಾರಂಭಿಸಿದ ಲತಾ ಮಂಗೇಶ್ಕರ್ ಅವರು, 1946ರಲ್ಲಿ ವಸಂತ ಜಾವಡೇಕರ್ ಅವರ ‘ಆಪ್ ಕಿ ಸೇವಾ ಮೇ’ಹಿಂದಿ ಚಲನಚಿತ್ರದಲ್ಲಿ ‘ಪಾ ಲಾಗೂನ್ ಕರ್ ಜೋರಿ’ಹಾಡಿನೊಂದಿಗೆ ಹಿಂದಿ ಚಲನಚಿತ್ರರಂಗಕ್ಕೆ ಕಾಲಿರಿಸಿದರು. ಬಾಲಿವುಡ್ ಸಿನಿಮಾಗಳ ಜೊತೆಗೆ 36 ಪ್ರಾದೇಶಿಕ ಭಾಷೆಗಳ ಹಾಗೂ ವಿದೇಶಿ ಭಾಷೆಗಳ ಚಲನಚಿತ್ರಗಳಲ್ಲೂ ಹಾಡಿದ್ದಾರೆ.

ಲತಾ ಮಂಗೇಶ್ಕರ್ ಅವರು, ಹಿಂದಿ ಸಿನಿಮಾ ರಂಗದ ಹಳೆತಲೆಮಾರಿನ ನಾಯಕ ನಟಿ ಮಧುಬಾಲಾ ಮತ್ತು ಈಚೆಗಿನ ನಟಿ ಕಾಜೋಲ್ವರೆಗಿನ ನಟಿಯರಿಗೆ ಹಿನ್ನೆಲೆ ಗಾಯಕಿಯಾಗಿ ದಾಖಲೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT