ಸೋಮವಾರ, ಡಿಸೆಂಬರ್ 9, 2019
20 °C
ಉಸಿರಾಟದ ತೊಂದರೆಯಿಂದ ಬಳುತ್ತಿರುವ ಗಾಯಕಿ

ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ತುಸು ಚೇತರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ‘ಖ್ಯಾತ ಗಾಯಕಿ ಲತಾ ಮಂಗೇಶ್ಕರ್ (90) ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡು ಬಂದಿದೆ’ ಎಂದು ಇಲ್ಲಿನ ಬ್ರೀಚ್‌ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ.ಪತಿತ್‌ ಸಮ್‌ಧಾನಿ ತಿಳಿಸಿದ್ದಾರೆ. 

‘ಲತಾ ಅವರ ಆರೋಗ್ಯ ಸ್ಥಿರವಾಗಿದ್ದು, ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಅವರಿನ್ನೂ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಅವರು ಮಾಹಿತಿ ನೀಡಿದ್ದಾರೆ. 

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಲತಾ ಅವರನ್ನು ಸೋಮವಾರ ಮುಂಬೈನ ಬ್ರೀಚ್‌ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ: ಆಸ್ಪತ್ರೆಗೆ ದಾಖಲು

‘ಪ್ರಾಮಾಣಿಕವಾಗಿ ಹೇಳುವುದಾದರೆ ನೋವನ್ನು ಸಹಿಸಿಕೊಳ್ಳುವ ಅವರ ಸಾಮರ್ಥ್ಯ ಚೆನ್ನಾಗಿದೆ. ಗಾಯಕಿಯಾಗಿರುವುದರಿಂದ ಅವರ ಶ್ವಾಸಕೋಶಗಳು ಸಾಮರ್ಥ್ಯ ಮೀರಿ ಕೆಲಸ ಮಾಡಿವೆ. ಅವರು ಆಸ್ಪತ್ರೆಯಿಂದ ಮನೆಗೆ ತೆರಳಿದ ಬಳಿಕ ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ನೀಡುವುದಾಗಿ’ ಲತಾ ಅವರ ಸಾರ್ವಜನಿಕ ಸಂಪರ್ಕಾಧಿಕಾರಿ (ಪಿಆರ್‌ಒ) ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ಹಿಂದಿ, ಪ್ರಾದೇಶಿಕ ಮತ್ತು ವಿದೇಶಿ ಭಾಷೆಗಳಲ್ಲಿ ಲತಾ ಅವರು ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. 2004ರಲ್ಲಿ ಯಶ್‌ ಚೋಪ್ರಾ ನಿರ್ದೇಶನದ ‘ವೀರ್ ಝಾರಾ’ ಚಿತ್ರ ಲತಾ ಮಂಗೇಶ್ಕರ್‌ ಹಾಡಿದ ಕೊನೆಯ ಸಿನಿಮಾ. 2001ರಲ್ಲಿ ಲತಾ ಅವರಿಗೆ ‘ಭಾರತ ರತ್ನ’ ಪುರಸ್ಕಾರ ನೀಡಿ ಗೌರವಿಸಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು