ಬುಧವಾರ, ಜನವರಿ 22, 2020
18 °C

ಆಸ್ಪತ್ರೆಯಿಂದ ಮನೆಗೆ ಮರಳಿದ ಲತಾ ಮಂಗೇಶ್ಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮೂರು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಗಾಯಕಿ ಲತಾ ಮಂಗೇಶ್ಕರ್‌ (90) ಅವರ ಆರೋಗ್ಯ ಸುಧಾರಣೆಯಾಗಿದ್ದು, ಭಾನುವಾರ ಅವರು ಮನೆಗೆ ಮರಳಿದ್ದಾರೆ.

ಉಸಿರಾಟದ ತೊಂದರೆ ಕಾಣಿಸಿ ಕೊಂಡಿದ್ದ ಕಾರಣ ಲತಾ ಅವರನ್ನು ಇಲ್ಲಿನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ನ. 11 ರಂದು ದಾಖಲಿಸಲಾಗಿತ್ತು. 28 ದಿನ ಗಳವರೆಗೆ ಅವರು ಆಸ್ಪತ್ರೆಯಲ್ಲಿದ್ದರು.

‘ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾ ಗಿದ್ದೆ. ಸಂಪೂರ್ಣ ಗುಣಮುಖ ವಾಗಿದ್ದು, ಭಾನುವಾರ ಮನೆಗೆ ಬಂದಿದ್ದೇನೆ. ನಾನು ಬೇಗ ಚೇತರಿಸಿಕೊಳ್ಳಲೆಂದು ದೇವರಲ್ಲಿ ಪ್ರಾರ್ಥಿಸಿದ ಎಲ್ಲ ಅಭಿಮಾನಿಗಳಿಗೂ ಧನ್ಯವಾದಗಳು’ ಎಂದು ಲತಾ ಮಂಗೇಶ್ಕರ್‌ ಟ್ವೀಟ್‌ ಮಾಡಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು