ಗುರುವಾರ , ಮೇ 28, 2020
27 °C

ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿುಯವರಿಗೆ ಮೀಸಲಾತಿ: ಕಾನೂನು ಮಾನ್ಯತೆ ಕಷ್ಟ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮೇಲ್ಜಾತಿಗಳಲ್ಲಿನ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರಷ್ಟು ಮೀಸಲಾತಿ ಸಂವಿಧಾನಬಾಹಿರ ಮತ್ತು ಚುನಾವಣಾ ಅಸ್ತ್ರ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರದ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ಹಿರಿಯ ವಕೀಲರಾದ ರಾಕೇಶ್ ದ್ವಿವೇದಿ, ರಾಜೀವ್‌ ಧವನ್‌ ಮತ್ತು ಅಜಿತ್‌ ಸಿನ್ಹಾ ಅವರು ಮಸೂದೆ ಕುರಿತು ಆಕ್ಷೇಪ ಎತ್ತಿದ್ದಾರೆ. ಮೀಸಲಾತಿ ಪ್ರಮಾಣವು ಶೇ 50ಕ್ಕಿಂತ ಹೆಚ್ಚಿರಬಾರದು ಎಂದು ಇಂದಿರಾ ಸಾಹ್ನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಈ ತೀರ್ಪು ಮಸೂದೆ ಜಾರಿಗೆ ಅಡ್ಡಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

‘ಜನರನ್ನು ಮಾನಸಿಕವಾಗಿ ಸಂತೃಪ್ತಿ ಪಡಿಸುವುದೊಂದೇ ಈ ಮಸೂದೆ ಗುರಿಯಾಗಿದೆ. ಸಾಕಷ್ಟು ಕಾನೂನು ಅಡೆತಡೆಗಳಿದ್ದು, ಕಾನೂನಿನ ಮಾನ್ಯತೆ ದೊರೆಯುವುದು ಕಷ್ಟ’ ಎಂದು ಅಭಿಪ್ರಾಯಪಟ್ಟಿದ್ದಾರೆ.

**

ಶೇ 10ರ ಮೀಸಲಾತಿಗೆ ದೇವೇಗೌಡ ಬೆಂಬಲ 

ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯವರಿಗೆ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಶೇ 10ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಜೆಡಿಎಸ್‌ ಬೆಂಬಲವಿದೆ. ಸಮಾಜದಲ್ಲಿ ನಿರ್ಲಕ್ಷಕ್ಕೆ ಒಳಗಾಗಿರುವ ಹಾಗೂ ದುರ್ಬಲ ಸಮುದಾಯದ ಏಳ್ಗೆಯ ವಿಷಯದಲ್ಲಿ ಪಕ್ಷ ಯಾವತ್ತೂ ಬೆಂಬಲವಾಗಿ ನಿಲ್ಲಲಿದೆ.

–ಎಚ್‌.ಡಿ. ದೇವೇಗೌಡ, ಜೆಡಿಎಸ್‌ ವರಿಷ್ಠ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು