ಸೋಮವಾರ, ಡಿಸೆಂಬರ್ 9, 2019
17 °C
ಸುಪ್ರೀಂ ಆದೇಶ ಜಾರಿಗೆ ಬದ್ಧ: ಕೇರಳ ಸಿಎಂ

ಶಬರಿಮಲೆ: ಕಾಯ್ದೆ ರೂಪಿಸುವುದು ಅಸಾಧ್ಯ ಎಂದ ಪಿಣರಾಯಿ ವಿಜಯನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿರುವನಂತಪುರಂ: ‘ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಎಲ್ಲ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸುಪ್ರೀಂ ಕೋರ್ಟ್‌ನ ಆದೇಶಕ್ಕೆ ವಿರುದ್ಧವಾಗಿ ಕಾಯ್ದೆ ರೂಪಿಸುವುದು ಅಸಾಧ್ಯ’ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದರು.

‘ಜಲ್ಲಿಕಟ್ಟು’ ಅಥವಾ ಎತ್ತುಗಳ ಓಟದ ಸ್ಪರ್ಧೆ ಕುರಿತ ತೀರ್ಪಿಗೂ, ಶಬರಿಮಲೆಗೆ ಮಹಿಳೆಯರ ಪ್ರವೇಶ ಕುರಿತ ತೀರ್ಪಿಗೂ ಭಿನ್ನತೆ ಇದೆ. ಶಬರಿಮಲೆಗೆ ಸಂಬಂಧಿಸಿದ ತೀರ್ಪು ಲಿಂಗ ಅಸಮಾನತೆ ಮತ್ತು ಮೂಲಭೂತ ಹಕ್ಕಿಗೆ ಸಂಬಂಧಿಸಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ವಿಧಾನಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ಕೆಲವರು ಈ ಅಂಶವನ್ನು ಮರೆಮಾಚಿ ಜನರನ್ನು ಹಾದಿತಪ್ಪಿಸಲು ಯತ್ನಿಸುತ್ತಿದ್ದಾರೆ ಎಂದು ಪ್ರತಿಪಾದಿಸಿದರು.

ಎಲ್ಲ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸುಪ್ರೀಂ ಕೋರ್ಟ್‌ ಆದೇಶಕ್ಕೆ ಸಲ್ಲಿಸಲಾಗಿರುವ ಮೇಲ್ಮನವಿಗೆ ಸಂಬಂಧಿಸಿ ಶೀಘ್ರದಲ್ಲಿಯೇ ತೀರ್ಪು ನೀಡುವ ನಿರೀಕ್ಷೆಯಿದೆ. ಸರ್ಕಾರ ಆ ಆದೇಶ ಜಾರಿಗೆ ಬದ್ಧವಾಗಿದೆ. ಆದರೆ, ಯಾವುದೇ ಮಹಿಳೆ ದೇಗುಲ ಪ್ರವೇಶಕ್ಕೆ ನೆರವಾಗುವುದಿಲ್ಲ. ಕಾನೂನು ಸುವ್ಯವಸ್ಥೆ ರಕ್ಷಣೆಗೆ ಬೇಕಾಗಿರುವ ಅಗತ್ಯ ಕ್ರಮವನ್ನು ಕೈಗೊಳ್ಳಲಿದೆ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು