ಮಂಗಳವಾರ, ಡಿಸೆಂಬರ್ 10, 2019
19 °C

ಎನ್‌‌ಡಿಎ ಮಿತ್ರ ಪಕ್ಷಗಳ ಹೊಂದಾಣಿಕೆಗೆ ಸಮನ್ವಯ ಸಮಿತಿ ರಚನೆ: ಪ್ರಧಾನಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಎನ್‌‌ಡಿಎ ಮಿತ್ರಪಕ್ಷಗಳಲ್ಲಿ ಒಡಕು ಉಂಟಾಗದಂತೆ ಎಚ್ಚರವಹಿಸಿ ಎಲ್ಲಾ ಪಕ್ಷಗಳನ್ನು ಜೊತೆಯಲ್ಲಿ ಕರೆದೊಯ್ಯಲು ಸಹಾಯವಾಗುವ ಸಮನ್ವಯ ಸಮಿತಿ ರಚಿಸಬೇಕೆಂದು ಪ್ರಧಾನಿ ಬಳಿ ಒತ್ತಾಯಿಸಿದ್ದೇವೆ ಎಂದು ಎಲ್ ಜೆಪಿ ಅಧ್ಯಕ್ಷ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.

ಭಾನುವಾರ ನಡೆದ ಬಿಜೆಪಿ ಹಾಗೂ ಎನ್ ಡಿಎ ಮಿತ್ರ ಪಕ್ಷಗಳ ಜೊತೆ ನಡೆದ ಸಭೆ ನಡೆದ ನಂತರ ಎಎನ್ ಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿ ಈ ವಿಷಯ ತಿಳಿಸಿದ್ದಾರೆ.

ಚಳಿಗಾಲದ ಅಧಿವೇಶನದ ನಂತರ ಈ ಪ್ರಕ್ರಿಯೆ ಕೈಗೊಳ್ಳಬೇಕು. ಅಲ್ಲದೆ, ಸಂಚಾಲಕರನ್ನೂ ನೇಮಕ ಮಾಡಬೇಕೆಂದು ಒತ್ತಾಯಿಸಲಾಗಿದೆ ಎಂದು ಚಿರಾಗ್ ಪಾಸ್ವಾನ್ ಹೇಳಿದ್ದಾರೆ. ಸಮನ್ವಯ ಸಮಿತಿಯೇ ಸಂಚಾಲಕರನ್ನು ನೇಮಕ ಮಾಡಬೇಕು. ಈ ರೀತಿ ಮಾಡುವುದರಿಂದ ಮಿತ್ರಪಕ್ಷಗಳ ನಡುವೆ ಹೊಂದಾಣಿಕೆ ಇರಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ. ಚಿರಾಗ್ ಪಾಸ್ವಾನ್ ಬಿಹಾರದ ಲೋಕ ಜನಶಕ್ತಿ ಪಕ್ಷದ ಅಧ್ಯಕ್ಷ.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು