ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣದಲ್ಲಿ ಲಾಕ್‌ಡೌನ್‌ ಏ.30ರ ವರೆಗೆ ವಿಸ್ತರಣೆ

Last Updated 13 ಏಪ್ರಿಲ್ 2020, 12:25 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್‌ ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಲಾಕ್‌ಡೌನ್‌ ಅವಧಿಯು ನಾಳೆಗೆ (14–04–2020) ಮುಕ್ತಾಯವಾಗುತ್ತಿದೆ. ಲಾಕ್‌ಡೌನ್‌ ವಿಸ್ತರಣೆ ಬಗ್ಗೆ ಕೇಂದ್ರದಿಂದ ಮುನ್ಸೂಚನೆ ದೊರೆತಿರುವ ನಡುವೆಯೇ ಮಹಾರಾಷ್ಟ್ರ, ತಮಿಳುನಾಡು ಮತ್ತು ತೆಲಂಗಾಣ ಸರ್ಕಾರಗಳು ಲಾಕ್‌ಡೌನ್‌ ಅನ್ನು ವಿಸ್ತರಣೆ ಮಾಡಿ ಅಧಿಕೃತ ಆದೇಶ ಹೊರಡಿಸಿವೆ.

ಲಾಕ್‌ಡೌನ್‌ ವಿಸ್ತರಣೆ ಸಂಬಂಧ ಮಹಾರಾಷ್ಟ್ರ ಸರ್ಕಾರ ಸೋಮವಾರ ಅಧಿಕೃತವಾಗಿ ಅಧಿಸೂಚನೆ ಹೊರಿಡಿಸಿದೆ. ಸದ್ಯ ಮಹಾರಾಷ್ಟ್ರ ಸೋಂಕಿತರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ತಮಿಳುನಾಡು ಸರ್ಕಾರವೂ ಸೋಮವಾರ ಲಾಕ್‌ಡೌನ್‌ ಅನ್ನು ಏ.30ರ ವರೆಗೆ ವಿಸ್ತರಣೆ ಮಾಡಿದೆ. ರಾಜ್ಯಾದ್ಯಂತ ಸೆ.144 ಅನ್ನು ಜಾರಿ ಮಾಡಿರುವುದಾಗಿ ಸರ್ಕಾರ ತಿಳಿಸಿದೆ. ಸೋಂಕಿತರ ಪಟ್ಟಿಯಲ್ಲಿ ತಮಿಳುನಾಡು ಮೂರನೇ ಸ್ಥಾನದಲ್ಲಿದೆ.

ತೆಲಂಗಾಣ ಶನಿವಾರವೇ ಲಾಕ್‌ಡೌನ್‌ ಅನ್ನು ವಿಸ್ತರಿಸಿದೆ. ಈ ಸಂಬಂಧ ಸಂಪುಟ ಸಭೆ ಕರೆದು ತೀರ್ಮಾನ ಕೈಗೊಂಡಿದೆ.

ಈ ಮೂರು ರಾಜ್ಯಗಳು ಸೋಂಕಿತರ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT