ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ: 24 ವಲಸೆ ಕಾರ್ಮಿಕರ ಸಾವು, ಹಲವರಿಗೆ ಗಂಭೀರ ಗಾಯ

Last Updated 16 ಮೇ 2020, 3:16 IST
ಅಕ್ಷರ ಗಾತ್ರ

ಲಖನೌ:ಎರಡು ಟ್ರಕ್‌ಗಳು ಡಿಕ್ಕಿ ಹೊಡೆದ ಪರಿಣಾಮ 24 ವಲಸೆ ಕಾರ್ಮಿಕರು ಮೃತಪಟ್ಟು, ಹಲವರಿಗೆ ಗಾಯಗಳಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶ ರಾಜಧಾನಿ ಲಖನೌನಿಂದ 200 ಕಿ.ಮೀ ದೂರದಲ್ಲಿ, ಬೆಳಗಿನ ಜಾವ 3 ಗಂಟೆಗೆ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ.

ರಾಜಸ್ಥಾನದಿಂದ ಟ್ರಕ್‌ನಲ್ಲಿ ಬಿಹಾರ ಮತ್ತು ಜಾರ್ಖಂಡ್‌ಗಳಿಗೆ ವಲಸೆ ಕಾರ್ಮಿಕರು ತೆರಳುತ್ತಿದ್ದರು. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್‌ಡೌನ್‌ ಘೋಷಿಸಿದ ಬೆನ್ನಲ್ಲೇ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದರು. ಆ ಕಾರಣ ತಮ್ಮ ತವರಿಗೆ ವಾಪಸ್ಸಾಗುತ್ತಿದ್ದರು.

'ಅಪಘಾತದಲ್ಲಿ 24 ಜನರು ಮೃತಪಟ್ಟಿದ್ದಾರೆ. 22 ಜನರನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ. ಗಂಭೀರವಾಗಿ ಗಾಯಗೊಂಡ 15 ಜನರನ್ನು ಉತ್ತರ ಪ್ರದೇಶದ ಗ್ರಾಮೀಣ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಸಾಗಿಸಲಾಗಿದೆ. ವಲಸೆ ಕಾರ್ಮಿಕರು ರಾಜಸ್ಥಾನದಿಂದ ಬಿಹಾರ ಮತ್ತು ಜಾರ್ಖಂಡ್‌ಗೆ ತೆರಳುತ್ತಿದ್ದರು' ಎಂದು ಮುಖ್ಯ ವೈದ್ಯಾಧಿಕಾರಿ ಅರ್ಚನಾ ಶ್ರೀವಾಸ್ತವ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT