ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ ಹೆಚ್ಚಳ: ಸಾಮಾಜಿಕ ತಾಣಗಳಿಗೆ ನೋಟಿಸ್‌ ಜಾರಿ

Last Updated 26 ಏಪ್ರಿಲ್ 2020, 3:21 IST
ಅಕ್ಷರ ಗಾತ್ರ

ನವದೆಹಲಿ: ಲಾಕ್‌ಡೌನ್‌ ಸಮಯದಲ್ಲಿ ಪೋರ್ನ್‌ ವೆಬ್‌ಸೈಟ್‌ಗಳ ಮೂಲಕ ಮಕ್ಕಳ ಅಶ್ಲೀಲ ಚಿತ್ರಗಳ ವೀಕ್ಷಣೆ ಅಧಿಕವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸುವಂತೆ ಗೂಗಲ್‌, ಟ್ವಿಟರ್‌ ಮತ್ತು ವಾಟ್ಸಾಪ್‌ಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕು ಸಂರಕ್ಷಣಾ ಆಯೋಗ ನೋಟಿಸ್‌ ನೀಡಿದೆ.

ಕೊರೊನಾ ಸೋಂಕು ಸಂಬಂಧ ಭಾರತದಲ್ಲಿ ಲಾಕ್‌ಡೌನ್‌ ಘೋಷಿಸಲಾಗಿದ್ದು, ಅಶ್ಲೀಲ ಚಿತ್ರಗಳ ವೀಕ್ಷಣೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಭಾರತ ಸೇರಿದಂತೆ ವಿದೇಶಿ ಪೋರ್ನ್‌ ಸೈಟ್‌ಗಳ ಮೂಲಕ ಜನರು ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ಚಿತ್ರಗಳನ್ನು ನೋಡುವುದು ಹೆಚ್ಚಾಗಿದ್ದು, ಈ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕು ಸಂರಕ್ಷಣಾ ಆಯೋಗ ಆತಂಕ ವ್ಯಕ್ತಪಡಿಸಿದೆ.

ಮಕ್ಕಳ ಅಶ್ಲೀಲ ಚಿತ್ರಗಳ ವಿಚಾರವಾಗಿ ನೀಡಿರುವ ನೋಟಿಸ್‌ಗೆ ಸಾಮಾಜಿಕ ಮಾಧ್ಯಮಗಳಾದ ಗೂಗಲ್‌, ಟ್ವಿಟರ್‌ ಮತ್ತು ವಾಟ್ಸಾಪ್‌ಗಳು ಏಪ್ರಿಲ್‌ 30ರ ಒಳಗೆ ಪ್ರತಿಕ್ರಿಯಿಸಬೇಕೆಂದು ಸೂಚಿಸಿದೆ.

ಗೂಗಲ್ ಇಂಡಿಯಾಕ್ಕೆ ನೀಡಿದ ನೋಟಿಸ್‌ನಲ್ಲಿ, 'ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಲಭ್ಯವಿರುವ ಅಪ್ಲಿಕೇಶನ್‌ಗಳ ಮೂಲಕ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಬಹುದು. ಆ ಮೂಲಕ ಬಳಕೆದಾರರು ಮಕ್ಕಳಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೊಗಳನ್ನು ವೀಕ್ಷಿಸಬಹುದು. ಇದು ಆತಂಕಕಾರಿ ವಿಚಾರ' ಎಂದು ಹೇಳಿದೆ.

13 ವರ್ಷದ ಮೇಲಿನವರೂ ಟ್ವಿಟರ್‌ ಖಾತೆಯನ್ನು ತೆರೆಯುವುದಕ್ಕೆ ಅವಕಾಶವಿದೆ. ಟ್ವಿಟರ್‌ನಲ್ಲಿ ಲಭ್ಯವಿರುವ ಲಿಂಕ್‌ಗಳನ್ನು ಬಳಸಿ ಮಕ್ಕಳು ಸಹ ಅಶ್ಲೀಲ ಚಿತ್ರಗಳನ್ನು ನೋಡಲು ಅವಕಾಶ ಕಲ್ಪಿಸಿದಂತಾಗಿದೆ. ಇದರ ಕಟ್ಟಿನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ಸಂರಕ್ಷಣಾ ಆಯೋಗ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT