ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ: ಐದನೇ ಹಂತದ ಮತದಾನ ಆರಂಭ

ಸೋನಿಯಾ, ರಾಹುಲ್, ಸ್ಮೃತಿ, ರಾಜನಾಥ್ ಸಿಂಗ್ ಸೇರಿ ಹಲವು ಪ್ರಮುಖರ ಭವಿಷ್ಯ ನಿರ್ಧಾರ
Last Updated 6 ಮೇ 2019, 1:40 IST
ಅಕ್ಷರ ಗಾತ್ರ

ನವದೆಹಲಿ:ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಸೋಮವಾರ ಬೆಳಿಗ್ಗೆ 7 ಗಂಟೆಗೆಆರಂಭವಾಗಿದೆ. ಉತ್ತರ ಭಾರತದ ಏಳು ರಾಜ್ಯಗಳ 51 ಕ್ಷೇತ್ರಗಳ ಮತದಾರರು ಹಕ್ಕು ಚಲಾಯಿಸುತ್ತಿದ್ದಾರೆ.

ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ರಾಜಸ್ಥಾನ, ಜಾರ್ಖಂಡ್ ಮತ್ತು ಜಮ್ಮು–ಕಾಶ್ಮೀರದಲ್ಲಿ ಮತದಾನ ನಡೆಯಲಿದೆ. ಈ ಹಂತದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿಯ ಹಲವು ಘಟಾನುಘಟಿ ನಾಯಕರ ಭವಿಷ್ಯ ನಿರ್ಧಾರವಾಗಲಿದೆ.

ಉತ್ತರ ಪ್ರದೇಶದ ರಾಯ್‌ಬರೇಲಿ, ಅಮೇಠಿ ಮತ್ತು ಲಖನೌ ಕ್ಷೇತ್ರಗಳಲ್ಲಿ ಸೋಮವಾರ ಮತದಾನ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಕ್ರಮವಾಗಿ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಕಣದಲ್ಲಿದ್ದಾರೆ. ಇವರ ವಿರುದ್ಧ ಕ್ರಮವಾಗಿ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್, ಕೇಂದ್ರ ಸಚಿವೆ ಸ್ಮೃತಿ ಇರಾನಿ ಮತ್ತು ಎಸ್‌ಪಿಯ ಪೂನಂ ಸಿನ್ಹಾ ಸ್ಪರ್ಧೆಗೆ ಇಳಿದಿದ್ದಾರೆ.

ಈ ಹಂತದ ಮತದಾನದೊಂದಿಗೆ ರಾಜಸ್ಥಾನ ಮತ್ತು ಜಮ್ಮು –ಕಾಶ್ಮೀರದಲ್ಲಿ ಮತದಾನ ಪೂರ್ಣಗೊಳ್ಳಲಿದೆ.‌ ಆ ಮೂಲಕ 20 ರಾಜ್ಯಗಳಲ್ಲಿ ಮತದಾನ ಪೂರ್ಣಗೊಂಡಂತಾಗುತ್ತದೆ. ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಚಂಡೀಗಡದಲ್ಲಷ್ಟೇ ಮತದಾನ ಬಾಕಿ ಉಳಿದಿದೆ.

ಹಿಂದಿನ ನಾಲ್ಕೂ ಹಂತಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ನಡೆದ ಕಾರಣ, ಈ ಹಂತದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

424 ಈವರೆಗೆ ಮತದಾನ ಮುಗಿದಿರುವ ಕ್ಷೇತ್ರಗಳು

118 ಇನ್ನೂ ಮತದಾನ ನಡೆಯಬೇಕಿರುವ ಕ್ಷೇತ್ರಗಳು

2ಹಂತದ ಮತದಾನ ಇನ್ನಷ್ಟೇ ನಡೆಯಬೇಕಿದೆ

67 % ಈವರೆಗೆ ಆಗಿರುವ ಮತದಾನ ಪ್ರಮಾಣ

ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಮತ್ತು ಅವರ ಪತ್ನಿ ನಿಲೀಮಾ ಸಿನ್ಹಾ ಜಾರ್ಖಂಡ್‌ನ ಹಜಾರಿಭಾಗ್ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಸರತಿ ಸಾಲಿನಲ್ಲಿ ನಿಂತಿರುವುದು – ಎಎನ್‌ಐ ಚಿತ್ರ
ಕೇಂದ್ರದ ಮಾಜಿ ಸಚಿವ ಯಶವಂತ್ ಸಿನ್ಹಾ ಮತ್ತು ಅವರ ಪತ್ನಿ ನಿಲೀಮಾ ಸಿನ್ಹಾ ಜಾರ್ಖಂಡ್‌ನ ಹಜಾರಿಭಾಗ್ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಸರತಿ ಸಾಲಿನಲ್ಲಿ ನಿಂತಿರುವುದು – ಎಎನ್‌ಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT