ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಹುಲ್‌ ವಿಷಾದ: ಕ್ಷಮೆಗೆ ಬಿಜೆಪಿ ಪಟ್ಟು

Last Updated 22 ಏಪ್ರಿಲ್ 2019, 20:04 IST
ಅಕ್ಷರ ಗಾತ್ರ

ನವದೆಹಲಿ: ರಫೇಲ್‌ ಯುದ್ಧ ವಿಮಾನ ಖರೀದಿ ಒಪ್ಪಂದದ ವಿಚಾರದಲ್ಲಿ ‘ಚೌಕೀದಾರ್‌ ಚೋರ್‌’ ಎಂದು ಸುಪ್ರೀಂ ಕೋರ್ಟ್‌ ಕೂಡ ಹೇಳಿದೆ ಎಂಬ ಹೇಳಿಕೆಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ವಿಷಾದ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಅವರು ರಾಹುಲ್‌ ಹೇಳಿಕೆ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ದೂರು ದಾಖಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್‌, ತನ್ನ ಅಭಿಪ್ರಾಯವನ್ನು ತಪ್ಪಾಗಿ ಬಳಸಿಕೊಳ್ಳಲಾಗಿದೆ ಎಂದು ಹೇಳಿತ್ತು. ಅದಕ್ಕೆ ಸ್ಪಷ್ಟೀಕರಣ ಕೊಡಲು ರಾಹುಲ್‌ಗೆ ಸೂಚಿಸಿತ್ತು.

ಚುನಾವಣಾ ಪ್ರಚಾರದ ಭರದಲ್ಲಿ ಈ ಹೇಳಿಕೆ ನೀಡಲಾಗಿದೆ. ಅದು ಉದ್ದೇಶಪೂರ್ವಕ ಅಲ್ಲ. ಯಾವುದೇ ರೀತಿಯಲ್ಲಿಯೂ ನ್ಯಾಯಾಲಯದ ಘನತೆಯನ್ನು ಕುಗ್ಗಿಸುವ ಉದ್ದೇಶ ಇರಲಿಲ್ಲ ಎಂದು 26 ಪುಟಗಳ ಪ್ರಮಾಣಪತ್ರದಲ್ಲಿ ರಾಹುಲ್‌ ಹೇಳಿದ್ದಾರೆ.

ರಾಹುಲ್‌ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT