ಭಾನುವಾರ, ಸೆಪ್ಟೆಂಬರ್ 22, 2019
22 °C

ಮಧ್ಯಪ್ರದೇಶ: ಕಾಂಗ್ರೆಸ್‌ ಪುನಶ್ಚೇತನವೇ ಬಿಜೆಪಿ ಸವಾಲು

Published:
Updated:

ಭೋಪಾಲ್‌: ಮಧ್ಯ ಪ್ರದೇಶದ ಬುಂದೇಲ್‌ಖಂಡ ಪ್ರದೇಶದ ಏಳು ಲೋಕಸಭಾ ಕ್ಷೇತ್ರಗಳಲ್ಲಿ ಸೋಮವಾರ ಮತದಾನ ಆಗಲಿದೆ. ಇದು ಮಧ್ಯ ಪ್ರದೇಶದಲ್ಲಿನ ಎರಡನೇ ಹಂತದ ಮತದಾನ. ಮೊದಲ ಹಂತ ಏಪ್ರಿಲ್‌ 29ರಂದು ನಡೆದಿತ್ತು. 

ಈ ಏಳೂ ಕ್ಷೇತ್ರಗಳಲ್ಲಿ ಕಳೆದ ಚುನಾವಣೆಯಲ್ಲಿ ಬಿಜೆಪಿ ಗೆದ್ದಿತ್ತು. 

ಈ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷದ ಮುಖಂಡರು ಭಾರಿ ಪ್ರಚಾರ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಹೋಶಂಗಾಬಾದ್‌ನಲ್ಲಿ ರ‍್ಯಾಲಿ ನಡೆಸಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ರೇವಾ, ಟಿಕಮ್‌ಗಡ ಮತ್ತು ಖಜುರಾಹೊದಲ್ಲಿ ಪ್ರಚಾರ ಮಾಡಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ರೇವಾ, ಟಿಕಮ್‌ಗಡ, ದಾಮೋಹ್‌ ಮತ್ತು ಖಜುರಾಹೊದಲ್ಲಿ ಸಮಾವೇಶ ನಡೆಸಿದ್ದಾರೆ. 

ಏಪ್ರಿಲ್‌ 29ರಂದು ಮಧ್ಯ ಪ್ರದೇಶದ ಆರು ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆದಿತ್ತು. 2014ರಲ್ಲಿ ರಾಜ್ಯದ 29 ಕ್ಷೇತ್ರಗಳ ಪೈಕಿ 27ರಲ್ಲಿ ಬಿಜೆಪಿ ಗೆದ್ದಿತ್ತು. ರತ್ಲಂ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಗೆದ್ದು ತನ್ನ ಬಲವನ್ನು ಮೂರಕ್ಕೆ ಏರಿಸಿಕೊಂಡಿತ್ತು. 

15 ವರ್ಷಗಳ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಇದೇ ಗೆಲುವಿನ ಗತಿಯನ್ನು ಉಳಿಸಿಕೊಳ್ಳಲು ಕಾಂಗ್ರೆಸ್‌ ಶ್ರಮಿಸುತ್ತಿದೆ. 2014ರ ಫಲಿತಾಂಶ ಪುನರಾವರ್ತನೆಯಾಗಲಿ ಎಂದು ಬಿಜೆಪಿ ಬಯಸುತ್ತಿದೆ.

 

Post Comments (+)