ರಾಹುಲ್‌ ವಿರುದ್ಧ ಪ್ರಕರಣ: ತೀರ್ಪು ಕಾಯ್ದಿರಿಸಿದ ‘ಸುಪ್ರೀಂ’

ಭಾನುವಾರ, ಮೇ 26, 2019
30 °C

ರಾಹುಲ್‌ ವಿರುದ್ಧ ಪ್ರಕರಣ: ತೀರ್ಪು ಕಾಯ್ದಿರಿಸಿದ ‘ಸುಪ್ರೀಂ’

Published:
Updated:

ನವದೆಹಲಿ: ‘ಪ್ರಧಾನಿ ನರೇಂದ್ರ ಮೋದಿ ಕಳ್ಳ’ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ ಎಂಬ ಹೇಳಿಕೆ ನೀಡಿರುವುದಕ್ಕೆ ಬೇಷರತ್‌ ಕ್ಷಮೆ ಯಾಚಿಸಿರುವುದರಿಂದ ನ್ಯಾಯಾಂಗ ನಿಂದನೆ ಪ್ರಕರಣ ಕೈಬಿಡಬೇಕು ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಕೋರಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠವು ತೀರ್ಪನ್ನು ಕಾಯ್ದಿರಿಸಿದೆ.

ನ್ಯಾಯಾಲಯವು ತರಾಟೆಗೆ ತೆಗೆದುಕೊಂಡ ಬಳಿಕ ಬಹಳ ವಿಳಂಬವಾಗಿ ಅವರು ಕ್ಷಮೆ ಯಾಚಿಸಿದ್ದಾರೆ. ಹಾಗಾಗಿ ಅವರಿಗೆ ಜೈಲು ಶಿಕ್ಷೆ ವಿ‌ಧಿಸಬೇಕು ಅಥವಾ ಛೀಮಾರಿ ಹಾಕಬೇಕು ಎಂದು ನ್ಯಾಯಾಂಗ ನಿಂದನೆ ದೂರು ದಾಖಲಿಸಿರುವ ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಒತ್ತಾಯಿಸಿದ್ದಾರೆ. 

‘ರಾಹುಲ್‌ ಅವರಿಗೆ ಜೈಲು ಶಿಕ್ಷೆ ವಿಧಿಸುವ ಅಥವಾ ಛೀಮಾರಿ ಹಾಕುವ ಮೂಲಕ ರಾಹುಲ್‌ ಅವರ ಕ್ಷಮಾಪಣೆಯನ್ನು ತಿರಸ್ಕರಿಸಬೇಕು. ಸುಪ್ರೀಂ ಕೋರ್ಟ್‌ ತೀರ್ಪಿನ ಬಗ್ಗೆ ಜನರಿಗೆ ಬಹಳ ಗೌರವ ಇದೆ. ಆದರೆ, ಜನರನ್ನು ಅವರು ದಾರಿತಪ್ಪಿಸಿದ್ದಾರೆ. ಹಾಗಾಗಿ ರಾಹುಲ್‌ ಅವರು ಜನರ ಕ್ಷಮೆ ಕೇಳಬೇಕು’ ಎಂದು ಲೇಖಿ ಅವರ ವಕೀಲ ಮುಕುಲ್ ರೋಹಟಗಿ ವಾದಿಸಿದರು. 

ನ್ಯಾಯಾಲಯದ ಹೊರಗೆ ಇರುವವರಿಗಾಗಿ ರೋಹಟಗಿ ಅವರು ವಾದಿಸುತ್ತಿದ್ದಾರೆ ಎಂದು ರಾಹುಲ್ ಪರ ವಕೀಲ ಅಭಿಷೇಕ್‌ ಮನು ಸಿಂಘ್ವಿ ಹೇಳಿದರು. ಪ್ರಕರಣವನ್ನು ಕೈಬಿಡಬೇಕು ಎಂದು ಅವರು ವಾದಿಸಿದರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !