ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ: ಮೊದಲ ಹಂತದ ಮತದಾನಕ್ಕೆ ಅಧಿಸೂಚನೆ

Last Updated 18 ಮಾರ್ಚ್ 2019, 20:19 IST
ಅಕ್ಷರ ಗಾತ್ರ

ನವದೆಹಲಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಸೋಮವಾರ ಅಧಿಸೂಚನೆ ಪ್ರಕಟವಾಗಿದೆ.

ಏಳು ಹಂತಗಳ ಪೈಕಿ ಮೊದಲ ಹಂತದ ಚುನಾವಣೆಯು ಏಪ್ರಿಲ್ 11ರಂದು ನಡೆಯಲಿದೆ. 20 ರಾಜ್ಯಗಳ 91 ಲೋಕಸಭಾ ಕ್ಷೇತ್ರಗಳು ಸ್ಪರ್ಧೆಗೆ ಅಣಿ ಯಾಗಿವೆ. ಮಾರ್ಚ್ 28ರ ಸಂಜೆ ಹೊತ್ತಿಗೆ ಈ ಕ್ಷೇತ್ರಗಳಲ್ಲಿ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.

10 ರಾಜ್ಯಗಳು ಹಾಗೂ ಕೇಂದ್ರಾ ಡಳಿತ ಪ್ರದೇಶಗಳ ಎಲ್ಲ ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲೇ ಚುನಾವಣೆ ನಿಗದಿಯಾಗಿದೆ. ಕಾಶ್ಮೀರದ ಜಮ್ಮು ಮತ್ತು ಬಾರಾಮುಲ್ಲಾ ಕ್ಷೇತ್ರ ಗಳಿಗೂ ಮತದಾನ ನಡೆಯಲಿದೆ. ಉತ್ತರ ಪ್ರದೇಶ, ಬಿಹಾರ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳ ವಿವಿಧ ಕ್ಷೇತ್ರಗಳಿಗೆ ಎಲ್ಲ ಏಳೂ ಹಂತಗಳಲ್ಲಿ ಮತದಾನ ನಡೆಯಲಿದೆ.

ಎನ್‌ಡಿಎ ಹಾಗೂ ಯುಪಿಎ ಮೈತ್ರಿಕೂಟಗಳು ಹಲವು ರಾಜ್ಯಗಳಲ್ಲಿ ಸೀಟು ಹೊಂದಾಣಿಕೆ ಮಾಡಿಕೊಂಡು ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿವೆ. ಎರಡನೇ ಬಾರಿಯೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ವಾಪಸಾಗುವ ವಿಶ್ವಾಸದಲ್ಲಿ ಎನ್‌ಡಿಎ ಇದೆ.2014ರ ಚುನಾವಣೆಯಲ್ಲಿ ಈ ಮೈತ್ರಿಕೂಟವು 336 ಸ್ಥಾನಗಳಲ್ಲಿ ಗೆದ್ದು, ಗದ್ದುಗೆ ಹಿಡಿದಿತ್ತು. ಕಾಂಗ್ರೆಸ್ 44 ಕ್ಷೇತ್ರಗಳಲ್ಲಷ್ಟೇ ಗೆಲ್ಲಲು ಸಾಧ್ಯವಾಗಿತ್ತು.

ಮೊದಲ ಹಂತದ ಚುನಾವಣಾ ಪ್ರಕ್ರಿಯೆ

*ನಾಮಪತ್ರ ಸಲ್ಲಿಕೆಗೆ ಕೊನೆ ದಿನ: ಮಾರ್ಚ್ 25

*ನಾಮಪತ್ರಗಳ ಪರಿಶೀಲನೆ: ಮಾರ್ಚ್ 26

*ನಾಮಪತ್ರ ವಾಪಸ್ ಪಡೆಯಲು ಕೊನೆ ದಿನ: ಮಾರ್ಚ್ 28

*ಮೊದಲ ಹಂತದ ಮತದಾನ ದಿನ: ಏಪ್ರಿಲ್ 11

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT