ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಬಿಟ್ಟ ಹಿರಿಯ ನಾಯಕ

Last Updated 26 ಮಾರ್ಚ್ 2019, 19:34 IST
ಅಕ್ಷರ ಗಾತ್ರ

ಭುವನೇಶ್ವರ:ಒಡಿಶಾ ಬಿಜೆಪಿಯ ಹಿರಿಯ ನಾಯಕ ಮತ್ತು ಪಕ್ಷದ ರಾಜ್ಯ ಘಟಕದ ಮಾಜಿ ಉಪಾಧ್ಯಕ್ಷ ಸುಭಾಷ್ ಚೌಹಾಣ್ ಅವರು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜ್ಯದ ಬಾರಗಡ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ್ದಕ್ಕೆ ಪ್ರತಿಭಟನೆಯಾಗಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಅವರು ಹೇಳಿದ್ದಾರೆ.

ಸುಭಾಷ್ ಅವರು ಮಂಗಳವಾರ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಸಮೀರ್ ಮೊಹಾಂತಿ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ‘ರಾಜೀನಾಮೆ ನಿರ್ಧಾರದ ಬಗ್ಗೆ ಮತ್ತೆ ಯೋಚಿಸಿ ಎಂದು ಸುಭಾಷ್ ಅವರಿಗೆ ಹೇಳಿದ್ದೇನೆ’ ಎಂದು ಮೊಹಾಂತಿ ಮಾಹಿತಿ ನೀಡಿದ್ದಾರೆ.

30 ವರ್ಷಗಳಿಂದ ಆರ್‌ಎಸ್‌ಎಸ್‌ ಸ್ವಯಂಸೇವಕರಾಗಿ ಕೆಲಸ ಮಾಡಿರುವ ಸುಭಾಷ್, ಬಿಜೆಪಿ ತಳಮಟ್ಟದ ಕಾರ್ಯಕರ್ತರೊಂದಿಗೆ ಉತ್ತಮ ಸಂಪರ್ಕ ಹೊಂದಿದ್ದಾರೆ. ಹೀಗಾಗಿ ಅವರ ರಾಜೀನಾಮೆ ಪಕ್ಷಕ್ಕೆ ದೊಡ್ಡ ಹಿನ್ನಡೆಯಾಗಲಿದೆ ಎನ್ನಲಾಗಿದೆ.

2014ರ ಚುನಾವಣೆಯಲ್ಲಿ ಅವರು ಇದೇ ಕ್ಷೇತ್ರದಿಂದ ಸ್ಪರ್ಧಿಸಿ, 3.72 ಲಕ್ಷ ಪಡೆದಿದ್ದರು. ಬಿಜೆಡಿ ಅಭ್ಯರ್ಥಿ ಎದುರು ಕೇವಲ 11,178 ಮತಗಳಿಂದ ಸೋತಿದ್ದರು.

‘ಗೆಲ್ಲುವ ಸಾಮರ್ಥ್ಯವನ್ನು ಕಡೆಗಣಿಸಿ, ಪ್ರಭಾವವೇ ಇಲ್ಲದ ನಾಯಕನನ್ನು ಬಿಜೆಪಿ ಕಣಕ್ಕೆ ಇಳಿಸಿದೆ. ಇಲ್ಲಿ ಪಕ್ಷದ ‘ಮಹಾನ್ ನಾಯಕರ ರ‍್ಯಾಲಿ’, ಉಚಿತ ಎಲ್‌ಪಿಜಿ ಯೋಜನೆಗಳು ಕೆಲಸ ಮಾಡುವುದಿಲ್ಲ. ಬದಲಿಗೆ ಜನರೊಂದಿಗೆ ಒಡನಾಟವಿರುವ ಕಾರ್ಯಕರ್ತ ಮಾತ್ರ ಚುನಾವಣೆ ಗೆಲ್ಲುತ್ತಾನೆ’ ಎಂದು ಅವರು ಬಿಜೆಪಿಗೆ ಸವಾಲು ಹಾಕಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT