ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ ಮೊದಲ ಹಂತ: ಇಂದು ಮತ

ಆಂಧ್ರದಲ್ಲಿ ಲೋಕಸಭೆ, ವಿಧಾನಸಭೆಗೆ ಒಟ್ಟಿಗೆ ಚುನಾವಣೆ
Last Updated 10 ಏಪ್ರಿಲ್ 2019, 20:10 IST
ಅಕ್ಷರ ಗಾತ್ರ

ಹೈದರಾಬಾದ್: ಲೋಕಸಭೆಯ ಮೊದಲ ಹಂತದ ಮತದಾನ ಗುರುವಾರ ನಡೆಯಲಿದೆ.ಈ ಹಂತದಲ್ಲಿ 20 ರಾಜ್ಯಗಳ 91 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಿಗದಿಯಾಗಿದೆ.

ಮೊದಲ ಹಂತದ ಮತದಾನಕ್ಕೆ ಆಂಧ್ರಪ್ರದೇಶ ಹಾಗೂ ತೆಲಂಗಾಣ ಸಜ್ಜಾಗಿವೆ.ಆಂಧ್ರಪ್ರದೇಶ ವಿಧಾನಸಭೆಯ 175 ಕ್ಷೇತ್ರ, 25 ಲೋಕಸಭಾ ಕ್ಷೇತ್ರ ಹಾಗೂ ತೆಲಂಗಾಣದ 17 ಲೋಕಸಭಾ‌ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಲಿದೆ.

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

2014ರಲ್ಲಿ ಆಂಧ್ರಪ್ರದೇಶ ವಿಭಜನೆಯಾಗಿ ತೆಲಂಗಾಣ ರಾಜ್ಯ ರೂಪುಗೊಂಡ ಬಳಿಕ ನಡೆಯುತ್ತಿರುವ ಮೊದಲ ಸಾರ್ವತ್ರಿಕ ಚುನಾವಣೆ ಇದಾಗಿದೆ.

ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. ತೆಲುಗುದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಹಾಗೂ ಆಂಧ್ರ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರು ಕುಪ್ಪಂ ವಿಧಾನಸಭಾ ಕ್ಷೇತ್ರದಿಂದ ಸತತ 9ನೇ ಬಾರಿಗೆ ಮರು ಆಯ್ಕೆ ಬಯಸಿದ್ದಾರೆ.

ಅಮರಾವತಿ ವಲಯದ ಹಿಂದುಳಿದ ವರ್ಗಗಳ ಜನರೇ ಅಧಿಕವಾಗಿರುವ ಮಂಗಳಗಿರಿಯಿಂದ ನಾಯ್ಡು ಪುತ್ರ ನಾರಾ ಲೋಕೇಶ್ ಸ್ಪರ್ಧಿಸಿದ್ದಾರೆ. ಮುಖ್ಯಮಂತ್ರಿ ಪದವಿಯ ಆಕಾಂಕ್ಷಿ ವೈ.ಎಸ್‌. ಜಗನ್‌ಮೋಹನ್ ರೆಡ್ಡಿ ಅವರು ತಮ್ಮ ಕುಟುಂಬದ ಭದ್ರಕೋಟೆ ಪುಲಿವೆಂದುಲ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಚಿತ್ರನಟ ಪವನ್ ಕಲ್ಯಾಣ್ ಮೊದಲ ಬಾರಿಗೆ ಅದೃಷ್ಟ ಪರೀಕ್ಷೆಗೆ ಸಿದ್ಧರಾಗಿದ್ದಾರೆ.

ತೆಲಂಗಾಣ ಸಿದ್ಧ:ಕಳೆದ ಡಿಸೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣದ ಗದ್ದುಗೆ ಹಿಡಿದಿದ್ದ ತೆಲಂಗಾಣ ರಾಷ್ಟ್ರ ಸಮಿತಿಯು (ಟಿಆರ್‌ಎಸ್) ಎಐಎಂಐಎಂ ಪಕ್ಷದ ಜೊತೆಗೂಡಿ ಮತ್ತೆ ಜಯ ಸಾಧಿಸುವ ಉತ್ಸಾಹದಲ್ಲಿದೆ.

ಪ್ರತಿಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ, ಆಯ್ದ ಕ್ಷೇತ್ರಗಳ ಗೆಲುವಿನ ಮೇಲೆ ಗಮನ ಕೇಂದ್ರೀಕರಿಸಿವೆ.

16 ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ ಟಿಆರ್‌ಎಸ್ ಪುನರುಚ್ಚರಿಸಿದೆ. ಎಐಎಂಐಎಂ ಪಕ್ಷಕ್ಕೆ ಒಂದು ಸ್ಥಾನ ಬಿಟ್ಟುಕೊಟ್ಟಿದೆ. ಪಕ್ಷದ ಮುಖ್ಯಸ್ಥ ಅಸಾದುದ್ದೀನ್‌ ಒವೈಸಿ ಅವರು ಹೈದರಾಬಾದ್ ಕ್ಷೇತ್ರದಿಂದ ನಾಲ್ಕನೇ ಬಾರಿಗೆ ಮರು ಆಯ್ಕೆ ಬಯಸಿದ್ದಾರೆ.

ಎಡಪಂಥೀಯ ತೀವ್ರಗಾಮಿಗಳ ಬೆದರಿಕೆ ಇರುವ 13 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 7ರಿಂದ ಸಂಜೆ 4 ಗಂಟೆವರೆಗೆ ಮತದಾನ ನಿಗದಿಯಾಗಿದೆ. ಉಳಿದ ಕಡೆ ಸಂಜೆ 5 ಗಂಟೆವರೆಗೂ ಮತದಾನ ನಡೆಯಲಿದೆ.

ನಿಜಾಮಾಬಾದ್ ಕ್ಷೇತ್ರದ ಚುನಾವಣೆ ಈ ಬಾರಿ ಗಮನ ಸೆಳೆದಿದೆ. 170 ರೈತರು ಸೇರಿ 185 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಪ್ರತಿ ಮತಗಟ್ಟೆಗೆ 12 ಇವಿಎಂಗಳನ್ನು ಒದಗಿಸಲಾಗಿದೆ.

ಅಣಕು ಮತದಾನ ಪ್ರಕ್ರಿಯೆಗೆ ಸಮಯ ಹಿಡಿಯುವುದರಿಂದ ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಇಲ್ಲಿ ಮತದಾನದ ಅವಧಿ ನಿಗದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT