ಆಂಧ್ರಪ್ರದೇಶ: ಚುನಾವಣಾ ಹಿಂಸಾಚಾರಕ್ಕೆ ಎರಡು ಬಲಿ

ಮಂಗಳವಾರ, ಏಪ್ರಿಲ್ 23, 2019
27 °C

ಆಂಧ್ರಪ್ರದೇಶ: ಚುನಾವಣಾ ಹಿಂಸಾಚಾರಕ್ಕೆ ಎರಡು ಬಲಿ

Published:
Updated:

ಹೈದರಾಬಾದ್‌: ಆಂಧ್ರಪ್ರದೇಶದಲ್ಲಿ ಚುನಾವಣಾ ಹಿಂಸಾಚಾರಕ್ಕೆ ಇಬ್ಬರು ಬಲಿಯಾಗಿದ್ದಾರೆ. 

ಒಂದೇ ಹಂತದಲ್ಲಿ ಲೋಕಸಭೆ ಮತ್ತು ವಿಧಾನಸಭೆಗೆ ಮತದಾನ ನಡೆಯುತ್ತಿದ್ದು ವಿವಿಧ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಉಂಟಾದ ಘರ್ಷಣೆಗೆ ಇಬ್ಬರು ಬಲಿಯಾಗಿದ್ದಾರೆ. 

ಅನಂತಪುರಂ, ಕಡಪ, ಗೋದಾವರಿ, ವಿಶಾಖಪಟ್ಟಣ ಜಿಲ್ಲೆಗಳ ವ್ಯಾಪ್ತಿಯಲ್ಲಿ ತೆಲುಗುದೇಶಂ, ವೈಎಸ್‌ಆರ್‌ ಕಾಂಗ್ರೆಸ್‌ ಮತ್ತು ನಟ ಪವನ್‌ ಕಲ್ಯಾಣ್‌ ನೇತೃತ್ವದ ಜನಾಸೇನ ಪಕ್ಷದ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿರುವುದಾಗಿ ವರದಿಯಾಗಿದೆ. 

ಅನಂತಪುರ ಜಿಲ್ಲೆಯ ತಾಡಪತ್ರಿಯಲ್ಲಿ ಸಂಭವಿಸಿದ ಘರ್ಷಣೆಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಕಡಪದಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌  ಮತ್ತು ಟಿಡಿಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು ಘಟನೆಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. 

ಘಟನೆಯಲ್ಲಿ ಅನಂತಪುರ, ಕಡಪ, ಗೋದಾವರಿ, ವಿಶಾಖಪಟ್ಟಣ ಜಿಲ್ಲೆಗಳಲ್ಲಿ ಪೊಲೀಸ್‌ ಭದ್ರತೆಯನ್ನು ಹೆಚ್ಚಿಸಲಾಗಿದೆ. ಹೈದರಾಬಾದಿನಿಂದ ಹೆಚ್ಚುವರಿ ಅರೆಸೇನಾ ಪಡೆಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿಕೊಡಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 4

  Sad
 • 1

  Frustrated
 • 9

  Angry

Comments:

0 comments

Write the first review for this !