ಬುಧವಾರ, ಸೆಪ್ಟೆಂಬರ್ 22, 2021
25 °C
‘ಕಣ್ಣಲ್ಲಿ ಕಣ್ಣಿಟ್ಟು ನೋಡಿ’ ಎಂದು ಪ್ರಧಾನಿಗೆ ರಾಹುಲ್ ಸವಾಲು

ರಫೆಲ್ ವಿಮಾನ ಖರೀದಿಯಲ್ಲಿ ಹಗರಣ: ರಾಹುಲ್‌ಗಾಂಧಿ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ’ಉದ್ಯಮಿಗಳ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಸಾಲಮನ್ನಾ ಮಾಡುವ ಪ್ರಧಾನಿಗೆ ರೈತರ ಸಾಲಮನ್ನಾ ಮಾಡಲು ಇಚ್ಛಾಶಕ್ತಿ ಇಲ್ಲ’ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದರು.

ಲೋಕಸಭೆ ಅಧಿವೇಶನದಲ್ಲಿ ಅವಿಶ್ವಾಸ ಗೊತ್ತುವಳಿ ಮೇಲಿನ ಚರ್ಚೆಯಲ್ಲಿ ಮಾತನಾಡಿದ ರಾಹುಲ್, ‘ರಫೆಲ್‌ ಯುದ್ಧ ವಿಮಾನ ಖರೀದಿಯಲ್ಲಿ ಹಗರಣ ನಡೆದಿದೆ. ಇದಕ್ಕೆ ಪ್ರಧಾನಿ ಉತ್ತರ ನೀಡಬೇಕು’ ಎಂದು ಆಗ್ರಹಿಸಿದರು. ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ದೇಶದ ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಆಪಾದಿಸಿದರು.

ಮಾತಿನ ಆರಂಭದಲ್ಲಿ, ಟಿಡಿಪಿ ಸಂಸದರು ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಅದರಲ್ಲಿನ ವಿಷಯಗಳನ್ನು ಪ್ರಸ್ತಾಪಿಸಿದರು. 

ದೇಶದ ಪ್ರತಿ ವ್ಯಕ್ತಿಯ ಖಾತೆಗೆ ₹ 15 ಲಕ್ಷ ಹಾಕುವುದಾಗಿ ಹೇಳಿದ್ದರು. ಉದ್ಯೋಗ ಸೃಷ್ಟಿಯ ಬಗ್ಗೆ ಹೇಳಿದ್ದರು. ಅವ್ಯಾವುದನ್ನೂ ಮಾಡಲಿಲ್ಲ. ನೋಟ್‌ ಬ್ಯಾನ್‌ ಮಾಡಿದರು. ಇದು ಜನರಿಗೆ ಹೊರೆಯಾಯಿತು. ಪ್ರಧಾನಿ ಅವರು ಉದ್ಯಮಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.

ಬಡವರಿಗೆ ಪ್ರಧಾನಿ ಹೃದಯದಲ್ಲಿ ಸ್ಥಾನವಿಲ್ಲ. ಒಮ್ಮೆ ಬೋಂಡಾ ಮಾರಾಟ ಮಾಡಿ ಎನ್ನುತ್ತೀರಿ. ಬಡವರ ಹಣವನ್ನು ಕಸಿಯುತ್ತಿದ್ದೀರಿ ಎಂದು ದೂರಿದರು.

‘ಪ್ರಧಾನಿ ಹೊರಗೆ ಹೋಗುವುದಿಲ್ಲ’ ಎಂದು ಸದನದಲ್ಲಿ ಹೇಳಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಮರುಕ್ಷಣ, ‘ಇಲ್ಲ ಇಲ್ಲ... ಹೋಗುತ್ತಾರೆ ವಿದೇಶಗಳಿಗೆ ಹೋಗುತ್ತಾರೆ’ ಎಂದು ಯಡವಟ್ಟಿನ ಹೇಳಿಕೆ ನೀಡಿದರು. ಇದು ಸದನದಲ್ಲಿ ನಗೆಯುಕ್ಕಿಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು