ಶುಕ್ರವಾರ, ಜೂನ್ 5, 2020
27 °C

ಲೋಕಪಾಲ್ ಶೋಧನಾ ಸಮಿತಿ: 17ರ ಒಳಗೆ ಅಫಿಡವಿಟ್‌ ಸಲ್ಲಿಕೆಗೆ ’ಸುಪ್ರೀಂ‘ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಲೋಕಪಾಲರ ಆಯ್ಕೆಗೆ ಸಂಬಂಧಿಸಿದಂತೆ ಶೋಧನಾ ಸಮಿತಿ ರಚನೆಗೆ ಕೈಗೊಂಡಿರುವ ಕ್ರಮಗಳ ಕುರಿತಂತೆ ಅಫಿಡವಿಟ್‌ ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಶುಕ್ರವಾರ ನಿರ್ದೇಶನ ನೀಡಿದೆ.

ಮುಖ್ಯನ್ಯಾಯಮೂರ್ತಿ ರಂಜನ್‌ ಗೋಗೊಯಿ ಹಾಗೂ ನ್ಯಾಯಮೂರ್ತಿ ಎಸ್‌.ಕೆ.ಕೌಲ್‌ ಅವರನ್ನು ಒಳಗೊಂಡ ಪೀಠ, ಸಮಿತಿ ರಚನೆಗೆ ಸಂಬಂಧಿಸಿದಂತೆ ಕಳೆದ ವರ್ಷ ಸೆಪ್ಟೆಂಬರ್‌ನಿಂದ ಈ ವರೆಗೆ ಏನು ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಜ. 17ರ ಒಳಗಾಗಿ ಅಫಡವಿಟ್‌ ಸಲ್ಲಿಸುವಂತೆ ಅಟಾರ್ನಿ ಜನರಲ್‌ ಕೆ.ಕೆ.ವೇಣುಗೋಪಾಲ ಅವರಿಗೆ ಸೂಚಿಸಿತು.

’ಕಳೆದ ವರ್ಷದ ಸೆಪ್ಟೆಂಬರ್‌ನಿಂದ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ‘ ಎಂದು ವೇಣುಗೋಪಾಲ ಹೇಳಿದಾಗ, ’ಸಾಕಷ್ಟು ಸಮಯ ತೆಗೆದುಕೊಂಡಿದ್ದೀರಿ. ಈ ವರೆಗೆ ಏನು ಕ್ರಮ ಕೈಗೊಂಡಿದ್ದೀರಿ‘ ಎಂದು ಪೀಠ ಪ್ರಶ್ನಿಸಿತು. ಅಟಾರ್ನಿ ಜನರಲ್‌ ವೇಣುಗೋಪಾಲ ಅವರು ಪುನಃ ಇದೇ ಮಾತನ್ನು ಹೇಳಿದಾಗ ’ಕಳೆದ ಸೆಪ್ಟೆಂಬರ್‌ ನಿಂದ ಈವರೆಗೆ ಏನು ಮಾಡಿದ್ದೀರಿ ಎಂಬ ಬಗ್ಗೆ ದಾಖಲೆಗಳನ್ನು ನೀಡಿ‘ ಎಂದು ಕಟುವಾಗಿ ಹೇಳಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು