ಉತ್ತರ ಪ್ರದೇಶದಲ್ಲಿ ಬಿಜೆಪಿಗೆ 74 ಕ್ಷೇತ್ರ

7
ಲೋಕಸಭಾ ಚುನಾವಣೆ

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ 74 ಕ್ಷೇತ್ರ

Published:
Updated:

ಲಖನೌ: ಬಿಎಸ್‌ಪಿ–ಎಸ್‌ಪಿ ಮೈತ್ರಿಯ ಹೊರತಾಗಿಯೂ ಬಿಜೆಪಿ ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರಗಳಲ್ಲಿ ಕನಿಷ್ಠ 74 ಸ್ಥಾನಗಳನ್ನು ಗೆಲ್ಲಲಿದೆ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ ಭವಿಷ್ಯ ನುಡಿದಿದ್ದಾರೆ.

ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದ ಉಸ್ತುವಾರಿಯಾಗಿ ಪಕ್ಷ ಅವರನ್ನು ಇತ್ತೀಚೆಗೆ ನೇಮಕ ಮಾಡಿದೆ. 

ಕಳೆದ ಬಾರಿಗಿಂತ ಬಿಜೆಪಿ ಈ ಬಾರಿ ಒಂದು ಸ್ಥಾನ ಹೆಚ್ಚಿಗೆ ಗಳಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಳೆದ ಚುನಾವಣೆಯಲ್ಲಿ ಬಿಜೆಪಿ 71 ಮತ್ತು ಮಿತ್ರಪಕ್ಷ ಅಪ್ನಾ ದಳ ಎರಡು ಕ್ಷೇತ್ರಗಳಲ್ಲಿ ಜಯಗಳಿಸಿದ್ದವು.

‘ಬಿಎಸ್‌ಪಿ–ಎಸ್‌ಪಿ ಮೈತ್ರಿ ಬಗ್ಗೆ ಸಾಕಷ್ಟು ಮೊದಲೇ ಸುಳಿವು ದೊರೆತಿತ್ತು. ಮೈತ್ರಿಕೂಟವು ಬಿಜೆಪಿ ಫಲಿತಾಂಶದ ಮೇಲೆ ಯಾವ ಪರಿಣಾಮ ಬೀರದು. ಈ ಬಾರಿ ಬಿಜೆಪಿಯ ಮತಗಳಿಕೆ ಪ್ರಮಾಣ ಶೇ 50ಕ್ಕೆ ಏರಲಿದೆ’ ಎಂದು ಆಶಯ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 2

  Happy
 • 2

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !