ಲೋಕಸಭೆ ಚುನಾವಣೆ: ಕಾಂಗ್ರೆಸ್‌ ಮೈತ್ರಿಗೆ ಅಖಿಲೇಶ್‌ ನಕಾರ

7
ಮಹಾಮೈತ್ರಿಯಲ್ಲಿ ಅಪಸ್ವರ

ಲೋಕಸಭೆ ಚುನಾವಣೆ: ಕಾಂಗ್ರೆಸ್‌ ಮೈತ್ರಿಗೆ ಅಖಿಲೇಶ್‌ ನಕಾರ

Published:
Updated:
Deccan Herald

ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನವೇ ವಿರೋಧ ಪಕ್ಷಗಳ ಉದ್ದೇಶಿತ ’ಮಹಾಮೈತ್ರಿ’ ರಚನೆಯಲ್ಲಿ ಅಪಸ್ವರ ಕೇಳಿ ಬಂದಿದೆ.

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ನಂತರ ಸಮಾಜವಾದಿ ಪಕ್ಷ ಕೂಡ ಮಧ್ಯ ಪ್ರದೇಶ ಮತ್ತು ಛತ್ತೀಸ್‌ಗಡ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆ ಮೈತ್ರಿ ಸಾಧ್ಯತೆಯನ್ನು ತಳ್ಳಿ ಹಾಕಿದೆ.

ಮಧ್ಯ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಜತೆ ಮೈತ್ರಿಗಾಗಿ ಕಾಯ್ದು ಸಾಕಾಗಿದೆ. ಆ ಪಕ್ಷದಿಂದ ಇನ್ನೂ ಯಾವ ಪ್ರತಿಕ್ರಿಯೆ ಬಂದಿಲ್ಲ. ಇನ್ನು ಎಷ್ಟು ದಿನ ಕಾಯಬೇಕು ಎಂದು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್‌ ಯಾದವ್‌ ಶನಿವಾರ ಬಹಿರಂಗವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.

ಮಧ್ಯ ಪ್ರದೇಶ ಮತ್ತು ಛತ್ತೀಸ್‌ಗಡ ಚುನಾವಣಾ ಮೈತ್ರಿ ಸಂಬಂಧ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಗೊಂಡ್ವಾನ ಗಣತಂತ್ರ ಪಕ್ಷದ (ಜಿಜಿಪಿ) ಜತೆ ಸಮಾಲೋಚನೆ ನಡೆಸುವುದಾಗಿ ಅವರು ಹೇಳಿದ್ದಾರೆ.

ಕಾಂಗ್ರೆಸ್‌ ಜತೆ ಮೈತ್ರಿಗೆ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ನಿರಾಕರಿಸಿದ ಬೆನ್ನಲ್ಲೇ ಅಖಿಲೇಶ್‌ ಅವರ ಈ ಹೇಳಿಕೆ ಹೊರಬಿದ್ದಿದೆ.

ಮೈತ್ರಿ ಯೋಚನೆ ಇಲ್ಲ: ಕಾಂಗ್ರೆಸ್‌ ಸ್ಪಷ್ಟನೆ: ಮಧ್ಯ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವ ಯೋಚನೆ ಪಕ್ಷಕ್ಕೆ ಇಲ್ಲ ಎಂದು ಕಾಂಗ್ರೆಸ್‌ ಪ್ರತಿಕ್ರಿಯಿಸಿದೆ.

ಛತ್ತೀಸ್‌ಗಡ ಮತ್ತು ಮಧ್ಯ ಪ್ರದೇಶದಲ್ಲಿ ಬಿಎಸ್‌ಪಿ ಮತ್ತು ಕಾಂಗ್ರೆಸ್‌ ಮೈತ್ರಿ ಏರ್ಪಡುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುರ್ಜೇವಾಲಾ ಸುಳಿವು ನೀಡಿದ್ದಾರೆ.

ಬರಹ ಇಷ್ಟವಾಯಿತೆ?

  • 4

    Happy
  • 1

    Amused
  • 0

    Sad
  • 0

    Frustrated
  • 2

    Angry

Comments:

0 comments

Write the first review for this !