ಶುಕ್ರವಾರ, ಜೂಲೈ 10, 2020
26 °C

ದೆಹಲಿಯಲ್ಲಿ ಲಘು ಭೂಕಂಪ

ಪಿಟಿಐ Updated:

ಅಕ್ಷರ ಗಾತ್ರ : | |

Delhi

ನವದೆಹಲಿ : ದೆಹಲಿಯಲ್ಲಿ ಸೋಮವಾರ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ 2.1 ರಷ್ಟು ತೀವ್ರತೆ ದಾಖಲಾಗಿದೆ. 

ದೆಹಲಿ–ಗುರುಗ್ರಾಮ ಗಡಿಯಲ್ಲಿ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ. ಈ ಪ್ರಾಕೃತಿಕ ವಿದ್ಯಮಾನ, ಮಧ್ಯಾಹ್ನ 1 ಗಂಟೆಗೆ 18 ಕಿ.ಮೀ. ಆಳದಲ್ಲಿ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಸಂಸ್ಥೆ ತಿಳಿಸಿದೆ. 

ಏಪ್ರಿಲ್‌ನಿಂದ ಈವರೆಗೆ ದೆಹಲಿಯಲ್ಲಿ 14 ಬಾರಿ ಲಘು ಭೂಕಂಪ ಸಂಭವಿಸಿದೆ ಎಂದು ಸಂಸ್ಥೆ ತಿಳಿಸಿದೆ. ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ. 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು