ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್‌ಪಿಜಿ ದರ ಕಡಿತ

Last Updated 30 ನವೆಂಬರ್ 2018, 19:25 IST
ಅಕ್ಷರ ಗಾತ್ರ

ನವದೆಹಲಿ : ಅಡುಗೆ ಅನಿಲ ಸಿಲಿಂಡರ್‌ (ಎಲ್‌ಪಿಜಿ) ಬೆಲೆಯನ್ನು ₹ 6.52ರಷ್ಟು ತಗ್ಗಿಸಲಾಗಿದೆ.

14.2 ಕೆಜಿ ತೂಕದ ಸಬ್ಸಿಡಿ ಸಹಿತದ ಪ್ರತಿ ಎಲ್‌ಪಿಜಿ ಸಿಲಿಂಡರ್‌ ಬೆಲೆಯು ಶನಿವಾರದಿಂದ (ಡಿ. 1) ಜಾರಿಗೆ ಬರಲಿದೆ ಎಂದು ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ (ಐಒಸಿ) ತಿಳಿಸಿದೆ.

ಪ್ರತಿ ಕುಟುಂಬಕ್ಕೆ ವರ್ಷಕ್ಕೆ 12 ಸಿಲಿಂಡರ್‌ಗಳಿಗೆ ಸರ್ಕಾರ ಸಬ್ಸಿಡಿ ನೀಡುತ್ತದೆ. ಈ ಸಬ್ಸಿಡಿ ಮೊತ್ತವನ್ನು ಬಳಕೆದಾರರ ಬ್ಯಾಂಕ್‌ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ ಇರುವ ₹ 945.50ರ ದರ ಈಗ ₹ 938.98ಕ್ಕೆ ಇಳಿಯಲಿದೆ. ಸಬ್ಸಿಡಿರಹಿತ ಅಥವಾ ಮಾರುಕಟ್ಟೆ ದರದಲ್ಲಿ ಖರೀದಿಸುವ ಎಲ್‌ಪಿಜಿ ಬೆಲೆಯನ್ನು ₹ 133 ರಷ್ಟು ತಗ್ಗಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT