ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ₹ 2.71 ಹೆಚ್ಚಳ

7

ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ₹ 2.71 ಹೆಚ್ಚಳ

Published:
Updated:
ಅಡುಗೆ ಅನಿಲ ಸಿಲಿಂಡರ್

ನವದೆಹಲಿ: ಸಬ್ಸಿಡಿಯಲ್ಲಿ ನೀಡುವ ಅಡುಗೆ ಅನಿಲ ಸಿಲಿಂಡರ್‌ನ ದರದಲ್ಲಿ ₹ 2.71 ಏರಿಕೆ ಮಾಡಲಾಗಿದ್ದು, ಶನಿವಾರ ಮಧ್ಯರಾತ್ರಿಯಿಂದ ನೂತನ ದರ ಜಾರಿಗೆ ಬಂದಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ದರ ಹೆಚ್ಚಳ, ಗೃಹ ಬಳಕೆಯ ಸಬ್ಸಿಡಿ ರಹಿತ ಅನಿಲ ಸಿಲಿಂಡರ್‌ನ ಪರಿಷ್ಕೃತ ದರಕ್ಕೆ ಜಿಎಸ್‌ಟಿ ವಿಧಿಸಿರುವ ಕಾರಣ ಸಬ್ಸಿಡಿಯಲ್ಲಿ ನೀಡುವ ಸಿಲಿಂಡರ್‌ನ ದರದಲ್ಲಿಯೂ ಏರಿಕೆ ಮಾಡಲಾಗಿದೆ ಎಂದು ಭಾರತೀಯ ತೈಲ ನಿಗಮದ ಪ್ರಕಟಣೆ ತಿಳಿಸಿದೆ.

ಆದರೆ, ದರದಲ್ಲಿ ಹೆಚ್ಚಳವಾಗಿರುವ ಮೊತ್ತವನ್ನು ಗ್ರಾಹಕರ ಬ್ಯಾಂಕ್‌ ಖಾತೆಗೆ ವರ್ಗಾಯಿಸುವ ಸಬ್ಸಿಡಿಯಲ್ಲಿ ಸೇರಿಸಲಾಗುತ್ತದೆ ಎಂದೂ ಪ್ರಕಟಣೆ ತಿಳಿಸಿದೆ.

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !