ಗುಂಪುದಾಳಿ: ಸಂತ್ರಸ್ತರ ಬೆಂಬಲಕ್ಕೆ ಕಾಂಗ್ರೆಸ್‌

7

ಗುಂಪುದಾಳಿ: ಸಂತ್ರಸ್ತರ ಬೆಂಬಲಕ್ಕೆ ಕಾಂಗ್ರೆಸ್‌

Published:
Updated:

ನವದೆಹಲಿ: ಗುಂಪುದಾಳಿಗಳ ಮೂಲಕ ಬಿಜೆಪಿಯು ದಲಿತರು ಮತ್ತು ಅಲ್ಪಸಂಖ್ಯಾತರು ಭೀತಿ ಮತ್ತು ಆತಂಕದಲ್ಲಿ ಬದುಕುವ ವಾತಾವರಣವನ್ನು ಸೃಷ್ಟಿಸಿದೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ದೇಶದಲ್ಲಿ ಸದಾ ದ್ವೇಷ ಮತ್ತು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುತ್ತಿರುವ  ನರೇಂದ್ರ ಮೋದಿ ಸರ್ಕಾರವನ್ನು ದೇಶದ ಜನರು ಎಂದಿಗೂ ಒಪ್ಪುವುದಿಲ್ಲ. ಬಿಜೆಪಿ ದ್ವೇಷ ಸಿದ್ಧಾಂತದ ವಿರುದ್ಧ ಕಾಂಗ್ರೆಸ್‌ ನಿರಂತರ ಹೋರಾಟ ನಡೆಸಲಿದೆ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ಸರ್ಕಾರಿ ಪ್ರಾಯೋಜಿತ ಗುಂಪುದಾಳಿಗಳು ನಡೆಯುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಬಿಜೆಪಿ ಸಚಿವರು, ಸಂಸದರು, ಶಾಸಕರು ಮತ್ತು ನಾಯಕರು ಬಹಿರಂಗವಾಗಿ ದಲಿತರು ಮತ್ತು ಅಲ್ಪಸಂಖ್ಯಾತರ ವಿರುದ್ಧ ಗುಂಪುದಾಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷವು ಗುಂಪುದಾಳಿಗೆ ಒಳಗಾದ ಸಂತ್ರಸ್ತರ ಪರ ನಿಲ್ಲಲಿದೆ ಎಂದು ರಾಹುಲ್‌ ಹೇಳಿದ್ದಾರೆ.

ಗುಂಪುದಾಳಿ ಸಂತ್ರಸ್ತರ ಬೆಂಬಲಕ್ಕೆ ಬಹಿರಂಗವಾಗಿ ನಿಲ್ಲುವಂತೆ ಕಾಂಗ್ರೆಸ್‌ ಕಾರ್ಯಕರ್ತರು, ಪದಾಧಿಕಾರಿಗಳಿಗೆ ಪತ್ರ ಬರೆದಿರುವುದಾಗಿ ಅವರು ಭಾನುವಾರ ತಿಳಿಸಿದ್ದಾರೆ.

ಮೋದಿ ಆಡಳಿತದಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ಹೆಚ್ಚುತ್ತಿರುವ ದಾಳಿಗಳ ಬಗ್ಗೆ ಸಾರ್ವಜನಿಕವಾಗಿ ಚರ್ಚೆಗಳನ್ನು ನಡೆಸುವಂತೆ ಅವರು ಕಾಂಗ್ರೆಸ್‌ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !