ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ₹4 ಲಕ್ಷ ಪರಿಹಾರ ಧನ

7

ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ₹4 ಲಕ್ಷ ಪರಿಹಾರ ಧನ

Published:
Updated:

ಕಲ್ಪಟ್ಟಾ (ವಯನಾಡು): ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ₹4 ಲಕ್ಷ ಮತ್ತು ಜಮೀನು ಕಳೆದುಕೊಂಡವರಿಗೆ  ₹6 ಲಕ್ಷ  ಪರಿಹಾರ ಧನ ನೀಡುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ವಯನಾಡು ಜಿಲ್ಲೆಯ ಕಲ್ಪಟ್ಟಾದಲ್ಲಿ ನಡೆದ ಸಭೆಯಲ್ಲಿ ಕೇರಳ ಮುಖ್ಯಮಂತ್ರಿ ಪರಿಹಾರ ಧನ ಘೋಷಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಅವರು ಮಳೆಯಿಂದ ಪ್ರಾಣ ಕಳೆದುಕೊಂಡವರ ಕುಟುಂಬದ ಸದಸ್ಯರಿಗೆ ₹4 ಲಕ್ಷ ಮತ್ತು ಮನೆ, ಜಮೀನು ಕಳೆದುಕೊಂಡವರಿಗೆ ₹10 ಲಕ್ಷ  ನೀಡಲಾಗುವುದು. ಕೇಂದ್ರ ಸರ್ಕಾರದಿಂದಲೂ ಸಹಾಯ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಶನಿವಾರ ಬೆಳಗ್ಗೆ 10.20ಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದಿಳಿದ ಪಿಣರಾಯಿ ರಸ್ತೆ ಮೂಲಕ ಕಲ್ಪಟ್ಟಾಕ್ಕೆ ಬಂದಿದ್ದರು. ಕಲ್ಪಟ್ಟಾ ಮುಂಡೇರಿಯಲ್ಲಿರುವ ನಿರಾಶ್ರಿತರ ಶಿಬಿರದಲ್ಲಿ ಕೆಲವು ಕಾಲ ಕಳೆದ ಅವರು ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಿತಿ-ಗತಿ ಅವಲೋಕನ ಸಭೆ ನಡೆಸಿದ್ದಾರೆ.

ಇಡುಕ್ಕಿ ಚೆರುತೋಣಿಯಲ್ಲಿ ಕಡಿಮೆಯಾದ ನೀರಿನ ಮಟ್ಟ

ತೊಡುಪುಳ: ಇಡುಕ್ಕಿ ಚೆರುತೋಣಿಯಲ್ಲಿ ನೀರಿನ ಮಟ್ಟ ಕುಸಿದಿದೆ. ಕಳೆದ 20 ಗಂಟೆಗಳಲ್ಲಿ ಒಂದು ಅಡಿಯಷ್ಟು ನೀರಿನ ಮಟ್ಟ ಕಡಿಮೆಯಾಗಿದೆ ಎಂದು ಮಲಯಾಳ ಮನೋರಮಾ ವರದಿ ಮಾಡಿದೆ, ಮಳೆಯ ಪ್ರಮಾಣ ಕಡಿಮೆಯಾದರೆ ನಾಲ್ಕೈದು ದಿನಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿದೆ.

ಕೇರಳ ಜನತೆಗೆ ಸಹಾಯ ಮಾಡಿ

ಪ್ರವಾಹದಿಂದ ಕಂಗೆಟ್ಟಿರುವ ಕೇರಳದ ಜನತೆಗೆ ಸಹಾಯ ಮಾಡುವಂತೆ ಪಿಣರಾಯಿ ವಿಜಯನ್ ಮನವಿ ಮಾಡಿದ್ದಾರೆ. ಸಹಾಯ ಮಾಡಲಿಚ್ಛಿಸುವರು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಹಣ ಕಳುಹಿಸಬಹುದು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !