ಪುಣೆ ಲೋಕಸಭಾ ಕ್ಷೇತ್ರದಿಂದ ಮಾಧುರಿ ದೀಕ್ಷಿತ್ ಬಿಜೆಪಿ ಅಭ್ಯರ್ಥಿ?

ಮುಂಬೈ: 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಪುಣೆ ಲೋಕಸಭಾ ಕ್ಷೇತ್ರದಿಂದ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್(51) ಅವರನ್ನು ಕಣಕ್ಕಿಳಿಸಲು ಬಿಜೆಪಿ ತಯಾರಿ ನಡೆಸುತ್ತಿರುವುದಾಗಿ ಪಕ್ಷದ ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.
ಬಿಜೆಪಿಯ ’ಸಂಪರ್ಕ್ ಫಾರ್ ಸಮರ್ಥನ್’ ಕಾರ್ಯಕ್ರಮದ ಸಂದರ್ಭ, ಇದೇ ಜೂನ್‌ನಲ್ಲಿ ಮುಂಬೈನಲ್ಲಿರುವ ಮಾಧುರಿ ದೀಕ್ಷಿತ್ ನಿವಾಸಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ; ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ವಿವರಿಸಿದ್ದರು. ಪುಣೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಧುರಿ ಅವರ ಹೆಸರು ಅಂತಿಮ ಪಟ್ಟಿಯಲ್ಲಿದೆ ಎಂದು ಬಿಜೆಪಿ ಹಿರಿಯ ಮುಖಂಡರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಹಮ್ ಆಪ್ಕೇ ಹೈ ಕೌನ್, ದಿಲ್ ತೋ ಪಾಗಲ್ ಹೇ, ಸಾಜನ್, ದೇವ್‌ದಾಸ್ ಸೇರಿ ಅನೇಕ ಹಿಟ್ ಚಿತ್ರಗಳಲ್ಲಿ ಅಭಿನಯಿಸಿರುವ ಮಾಧುರಿ ದೀಕ್ಷಿತ್ ನೃತ್ಯದಿಂದಲೂ ಅಭಿಮಾನಿಗಳನ್ನು ಸೃಷ್ಟಿಕೊಂಡವರು. ಪುಣೆಯಲ್ಲೂ ಸಾಕಷ್ಟು ಜನಪ್ರಿಯತೆ ಹೊಂದಿರುವ ಮಾಧುರಿ ಅವರನ್ನು ಕಣಕ್ಕಿಳಿಸಿ ಬಿಜೆಪಿ ಸ್ಥಾನ ಭದ್ರ ಮಾಡಿಕೊಳ್ಳಲು ಹವಣಿಸುತ್ತಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.