ಗುರುವಾರ , ಫೆಬ್ರವರಿ 27, 2020
19 °C

ಸಿಎಎ ವಿರುದ್ಧ ಮಧ್ಯಪ್ರದೇಶ ಸರ್ಕಾರ ನಿರ್ಣಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭೋಪಾಲ್‌: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಮಧ್ಯಪ್ರದೇಶ ಸರ್ಕಾರ ನಿರ್ಣಯ ಕೈಗೊಂಡಿದೆ. 

ಕಾಯ್ದೆಯ ರದ್ದತಿಗೆ ಆಗ್ರಹಿಸಲಾಗಿದ್ದು, ದೇಶದ ಸಂವಿಧಾನದ ಜಾತ್ಯತೀತ ತತ್ವಕ್ಕೆ ಈ ಕಾಯ್ದೆ ವಿರುದ್ಧವಾದದ್ದು ಎಂದು ಟೀಕಿಸಲಾಗಿದೆ. 

ಮುಖ್ಯಮಂತ್ರಿ ಕಮಲನಾಥ್‌ ಅವರ ನೇತೃತ್ವದಲ್ಲಿ ಬುಧವಾರ ನಡೆದ ಮಧ್ಯಪ್ರದೇಶ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಚಿವ ಪಿ.ಸಿ ಶರ್ಮಾ ತಿಳಿಸಿದ್ದಾರೆ.  

ಈಗಾಗಲೇ ಕೇರಳ, ರಾಜಸ್ಥಾನ, ಪಶ್ಚಿಮ ಬಂಗಾಳ, ಪಂಜಾಬ್‌ ಸರ್ಕಾರಗಳು ಸಿಎಎ ವಿರುದ್ಧ ನಿರ್ಣಯ ಕೈಗೊಂಡಿವೆ. ಮಧ್ಯಪ್ರದೇಶದ ಸೇರ್ಪಡೆಯೊಂದಿಗೆ ಸಿಎಎ ವಿರುದ್ಧ ನಿರ್ಣಯ ಕೈಗೊಂಡ ರಾಜ್ಯಗಳ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಸದ್ಯ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವದಲ್ಲಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು