ಬುಧವಾರ, ಜುಲೈ 28, 2021
23 °C

ಮಧ್ಯಪ್ರದೇಶ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಬಿಜೆಪಿ ನಾಯಕ ಬಲೇಂದು ಶುಕ್ಲಾ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

prajavani

ಭೋಪಾಲ್: ರಾಜ್ಯದ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಬಲೇಂದು ಶುಕ್ಲಾ ಅವರು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಅವರ ಸಮ್ಮುಖದಲ್ಲಿ ಶುಕ್ರವಾರ ಕಾಂಗ್ರೆಸ್ ಸೇರಿದರು.

ಬಾಲೆಂಡು ಶುಕ್ಲಾ ಕಾಂಗ್ರೆಸ್ ಸೇರಿದ್ದಾರೆ. ಈ ಮೊದಲು ಅವರು ಕಾಂಗ್ರೆಸ್ ಪಕ್ಷವನ್ನು ತೊರೆದ ಕಾರಣದಿಂದಾಗಿ ಅವರು ಪಕ್ಷದಲ್ಲಿ ಇರಲಿಲ್ಲ. ಈಗ ಮತ್ತೆ ಅವರು ಪಕ್ಷಕ್ಕೆ ಮರಳಿದ್ದಾರೆ. ನಾವೆಲ್ಲರೂ ಅವರನ್ನು ಸ್ವಾಗತಿಸುತ್ತೇವೆ. ಪಕ್ಷಕ್ಕೆ ಸೇರಲು ಬಯಸುವ ಇನ್ನು ಅನೇಕ ಜನರಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ತಿಳಿಸಿದ್ದಾರೆ.

ಕಾಂಗ್ರೆಸ್‌ನ ಭಾಗವಾಗಿದ್ದ ಶುಕ್ಲಾ ಅವರು 2009 ರಲ್ಲಿ ಪಕ್ಷವನ್ನು ತೊರೆದಿದ್ದರು. ಇತ್ತೀಚೆಗಷ್ಟೇ ಬಿಜೆಪಿಗೆ ಸೇರಿದ ಜ್ಯೋತಿರಾದಿತ್ಯ ಸಿಂಧಿಯಾ ಅವರೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಪಕ್ಷಕ್ಕೆ ವಿದಾಯ ಹೇಳಿದ್ದರು. ಇದೀಗ ಸಿಂದಿಯಾ ಬಿಜೆಪಿಗೆ ಸೇರಿರುವ ಬಗ್ಗೆ ಶುಕ್ಲಾ ಕೋಪಗೊಂಡಿದ್ದಾರೆ ಎಂದು ವರದಿಯಾಗಿದೆ.

ಮುಂಬರುವ ಉಪಚುನಾವಣೆಯಲ್ಲಿ ಶುಕ್ಲಾ ಅವರ ಪ್ರವೇಶವು ಪಕ್ಷಕ್ಕೆ ನೆರವಾಗಲಿದೆ ಎಂದು ಕಾಂಗ್ರೆಸ್ ಭರವಸೆ ಹೊಂದಿದೆ.

ಸಿಂಧಿಯಾ ಕಾಂಗ್ರೆಸ್ ತೊರೆದ ನಂತರ ಕಾಂಗ್ರೆಸ್‌ನ 22 ಶಾಸಕರು ವಿಧಾನಸಭೆಗೆ ರಾಜೀನಾಮೆ ನೀಡಿದ್ದರು. ಇದು ರಾಜ್ಯದಲ್ಲಿ ಕಮಲ್ ನಾಥ್ ನೇತೃತ್ವದ ಸರ್ಕಾರದ ಪತನಕ್ಕೆ ಕಾರಣವಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು