ಬುಧವಾರ, ಏಪ್ರಿಲ್ 21, 2021
25 °C

ಮಧ್ಯಪ್ರದೇಶ ಬಿಕ್ಕಟ್ಟು: ವಿಶ್ವಾಸಮತ ಯಾಚನೆಗೆ ರಾಜ್ಯಪಾಲರ ನಿರ್ದೇಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭೋಪಾಲ್‌: ಮಧ್ಯಪ‍್ರದೇಶ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಕಮಲ್‌ನಾಥ್‌ ಅವರಿಗೆ ವಿಶ್ವಾಸಮತ ಯಾಚಿಸಲು ಸೋಮವಾರ ಅವಕಾಶ ನೀಡುವಂತೆ ರಾಜ್ಯಪಾಲ ಲಾಲ್‌ಜಿ ಟಂಡನ್ ಅವರು ಸ್ಪೀಕರ್ ನರ್ಮದಾ ಪ್ರಸಾದ್ ಪ್ರಜಾಪತಿಗೆ ನಿರ್ದೇಶಿಸಿದ್ದಾರೆ. 

ಈ ಬಗ್ಗೆ ಆದೇಶ ಹೊರಡಿಸಿರುವ ಅವರು, ‘ಮಧ್ಯಪ್ರದೇಶದ ವಿಧಾನಸಭೆ ಅಧಿವೇಶನವು ಮಾರ್ಚ್ 16ರಂದು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ. ನಾನು ವಿಧಾನಸಭೆ ಉದ್ದೇಶಿಸಿ ಮಾತನಾಡಿದ ನಂತರ, ವಿಶ್ವಾಸಮತ ಯಾಚನೆಗೆ ಸ್ವೀಕರ್‌ ಅವಕಾಶ ನೀಡಲಿದ್ದಾರೆ’ ಎಂದು ರಾಜ್ಯಪಾಲರು ತಿಳಿಸಿದ್ದಾರೆ.

‘ಗುಂಡಿಯನ್ನು ಒತ್ತುವ ಮೂಲಕ ವಿಶ್ವಾಸಮತ ಯಾಚನೆ ಪ್ರಕ್ರಿಯೆ ನಡೆಯಲಿದೆ. ಬೇರೆ ಯಾವುದೇ ಮತದಾನ ವಿಧಾನ ಸ್ವೀಕಾರಾರ್ಹವಾಗುವುದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಮಧ್ಯ ಪ್ರದೇಶ ರಾಜಕೀಯ ಬಿಕ್ಕಟ್ಟು: ಬಹುಮತ ಸಾಬೀತಿಗೆ ಸಿದ್ಧ ಎಂದ ಕಮಲ್‌ನಾಥ್‌

‘ನನ್ನ ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಹೊಂದಿದೆ. ಇದನ್ನು ಸಾಬೀತುಪಡಿಸಲು ಸಿದ್ಧ’ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್‌ ಶುಕ್ರವಾರ ಹೇಳಿದ್ದರು. 

ಕಮಲ್‌ನಾಥ್‌ ನೇತೃತ್ವದ ಮಧ್ಯಪ್ರದೇಶ ಸರ್ಕಾರದ ಆರು ಮಂದಿ ಸಚಿವರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ಸ್ಪೀಕರ್‌ ಎನ್‌.ಪಿ. ಪ್ರಜಾಪತಿ ಶನಿವಾರ ತಿಳಿಸಿದ್ದರು.  

ಇದನ್ನೂ ಓದಿ: ಮಧ್ಯಪ್ರದೇಶ: 6 ಸಚಿವರ ರಾಜೀನಾಮೆ ಅಂಗೀಕಾರ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು