ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ಸರ್ಕಾರ ರಚನೆಯಲ್ಲಿ ಕಾಂಗ್ರೆಸ್‌ಗೆ ಎಸ್‌ಪಿ, ಬಿಎಸ್‌ಪಿ ಬೆಂಬಲ?

Last Updated 11 ಡಿಸೆಂಬರ್ 2018, 12:57 IST
ಅಕ್ಷರ ಗಾತ್ರ

ಮಧ್ಯ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಜಿದ್ದಾಜಿದ್ದಿ ಇನ್ನೂ ಮುಂದುವರಿದಿದ್ದು, ಅತಂತ್ರ ವಿಧಾನಸಭೆ ಸೃಷ್ಟಿಯಾದರೆ ಪಕ್ಷೇತರರು ಹಾಗೂ ಸಣ್ಣಪಕ್ಷಗಳು ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರವಹಿಸಲಿವೆ.

230 ವಿಧಾನಸಭಾ ಕ್ಷೇತ್ರಗಳ ಪೈಕಿ ಬಹುಮತ ಸಾಧಿಸಲು ಯಾವುದೇ ಪಕ್ಷ 116 ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು. ಪ್ರಸ್ತುತ ಕಾಂಗ್ರೆಸ್‌ 30 ಸ್ಥಾನಗಳಲ್ಲಿ ಗೆಲುವು ಪಡೆದು 115 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 29ರಲ್ಲಿ ಗೆದ್ದು 106 ಕ್ಷೇತ್ರಗಳಲ್ಲಿ ಮುನ್ನಡೆಯುತ್ತಿದೆ. ಯಾವುದೇ ಪಕ್ಷ ಸರಳ ಬಹುಮತ ಪಡೆಯುವಲ್ಲಿ ವಿಫಲವಾದಲ್ಲಿ ಪಕ್ಷೇತರರು ಅಥವಾ ಇತರೆ ಪಕ್ಷಗಳನ್ನು ಆಶ್ರಯಿಸುವ ಸಾಧ್ಯತೆಯಿದೆ.

ಬಿಎಸ್‌ಪಿ 2, ಜಿಜಿಪಿ, ಎಸ್‌ಪಿ ಹಾಗೂ ಬಿಎಸ್‌ಡಿ ತಲಾ ಒಂದು ಸ್ಥಾನ ಹಾಗೂ ಪಕ್ಷೇತರರು ನಾಲ್ಕು ಕ್ಷೇತ್ರಗಳಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ. ತಮ್ಮ ಬೆಂಬಲ ಯಾವ ದೊಡ್ಡ ಪಕ್ಷಕ್ಕೆಂದು ಯಾವ ಅಭ್ಯರ್ಥಿಗಳು ಹಾಗೂ ಪಕ್ಷ ಸುಳಿವು ಕೊಟ್ಟಿಲ್ಲ. ಸರ್ಕಾರ ರಚನೆಗಾಗಿ ಕಾಂಗ್ರೆಸ್ ಈಗಾಗಲೇ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರನ್ನು ಸಂಪರ್ಕಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಉತ್ತರ ಪ್ರದೇಶದ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಎಸ್‌ಪಿ ಮತ್ತು ಬಿಎಸ್‌ಪಿಯೊಂದಿಗೆ ಮೈತ್ರಿ ಹೊಂದಿತ್ತು. ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶದಲ್ಲಿ ಉಭಯ ಪಕ್ಷಗಳು ಕಾಂಗ್ರೆಸ್‌ಗೆ ಬೆಂಬಲ ನೀಡುವ ಸಾಧ್ಯತೆ ದಡ್ಡವಾಗಿದೆ ಎಂದು ಕಾಂಗ್ರೆಸ್‌ನ ಮುಖಂಡರೊಬ್ಬರು ತಿಳಿಸಿರುವುದಾಗಿ ಹಿಂದುಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಬಿಜೆಪಿ ಸರಳ ಬಹುಮತ ಪಡೆಯಲಿದೆ ಎಂದು ಬಿಜೆಪಿ ವಕ್ತಾರ ರಜನೀಶ್‌ ಅಗರ್ವಾಲ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT