ಶುಕ್ರವಾರ, ಜುಲೈ 30, 2021
28 °C

ಮಧ್ಯಪ್ರದೇಶ ರಾಜ್ಯಪಾಲ ಲಾಲ್‌ಜಿ ಟಂಡನ್‌ ಆರೋಗ್ಯ ಸ್ಥಿತಿ ಗಂಭೀರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಇಲ್ಲಿನ ಮೆದಾಂತ ಆಸ್ಪತ್ರೆಗೆ ದಾಖಲಾಗಿರುವ ಮಧ್ಯಪ್ರದೇಶ ರಾಜ್ಯಪಾಲ ಲಾಲ್‌ಜಿ ಟಂಡನ್‌ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್‌) ಅಳವಡಿಸಲಾಗಿದೆ.

ಉಸಿರಾಟದ ತೊಂದರೆ, ಜ್ವರ ಮತ್ತು ಮೂತ್ರಕೋಶದ ತೊಂದರೆ ಕಾರಣ ಅವರನ್ನು ಜೂನ್‌ 11ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸೋಮವಾರದಿಂದ ಅವರನ್ನು ವೆಂಟಿಲೇಟರ್‌ನಲ್ಲಿ  ಇಡಲಾಗಿದೆ. ಅವರಿಗೆ ತುರ್ತಾಗಿ  ಸಣ್ಣ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿದೆ. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಐಸಿಯುಗೆ ಅವರನ್ನು ವರ್ಗಾಯಿಸಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಹೇಳಿದ್ದಾರೆ.

ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದೂ ನಿಯಂತ್ರಣದಲ್ಲಿದೆ ಎಂದು ಅವರು ಹೇಳಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು