ಮಂಗಳವಾರ, ಜೂನ್ 2, 2020
27 °C

ಮಧ್ಯ ಪ್ರದೇಶ ರಾಜಕೀಯ: 12 ಗಂಟೆಗೆ ಸಿಎಂ ಕಮಲ್ ನಾಥ್ ಪತ್ರಿಕಾಗೋಷ್ಠಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Kamal nath

ಭೋಪಾಲ್: ಮಧ್ಯ ಪ್ರದೇಶ ರಾಜಕೀಯ ಬೆಳವಣಿಗೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಕಮಲ್ ನಾಥ್ ಅವರು ಇಂದು ಮಧ್ಯಾಹ್ನ 12 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ತಿಳಿಸಿದ್ದಾರೆ.

ಶುಕ್ರವಾರ ಸಂಜೆ 5 ಗಂಟೆ ಒಳಗೆ ವಿಶ್ವಾಸಮತ ಸಾಬೀತು ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂ ಕೋರ್ಟ್‌ ಗುರುವಾರ ಮಧ್ಯ ಪ್ರದೇಶ ವಿಧಾನಸಭೆ ಸ್ಪೀಕರ್‌ಗೆ ಆದೇಶ ನೀಡಿತ್ತು. ಅಗತ್ಯ ಸಂಖ್ಯಾಬಲ ಇಲ್ಲದಿರುವುದರಿಂದ ಕಮಲನಾಥ್ ರಾಜೀನಾಮೆ ನೀಡಲಿದ್ದಾರೆಯೇ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ದಿಗ್ವಿಜಯ್ ಸಿಂಗ್, ‘ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ಅಲ್ಲಿವರೆಗೂ ಕಾಯಿರಿ’ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌ ತೀರ್ಪಿಗೆ ಸಂಬಂಧಿಸಿ ಕಾನೂನು ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕಮಲನಾಥ್ ಗುರುವಾರ ಹೇಳಿದ್ದರು. ಹೀಗಾಗಿ ಅವರ ಮುಂದಿನ ನಡೆ ಏನು ಎಂಬುದನ್ನು ಪತ್ರಿಕಾಗೋಷ್ಠಿಯಲ್ಲಿ ಬಹಿರಂಗಪಡಿಸುವ ನಿರೀಕ್ಷೆ ಇದೆ.

ಕಮಲ್‌ನಾಥ್‌ ವಿರುದ್ಧ ಬಂಡೆದ್ದಿರುವ 22 ಶಾಸಕರು ಕಾಂಗ್ರೆಸ್‌ ತ್ಯಜಿಸಿ, ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಬೆಂಬಲಿಸಿ ಬಿಜೆಪಿಗೆ ಸೇರಲು ಸಿದ್ಧತೆ ನಡೆಸಿದ್ದಾರೆ. ಈ ಪೈಕಿ ಅನೇಕ ಶಾಸಕರು ಬೆಂಗಳೂರಿನ ಯಲಹಂಕದ ರಮಡ ಹೊಟೇಲ್‌ನಲ್ಲಿ ತಂಗಿದ್ದಾರೆ.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು