ಮಧ್ಯ ಪ್ರದೇಶ ಚುನಾವಣೆ: ಮಠ, ಮಂದಿರಗಳ ಮಾಹಿತಿ ಸಂಗ್ರಹಿಸಿದ ಬಿಜೆಪಿ!

7

ಮಧ್ಯ ಪ್ರದೇಶ ಚುನಾವಣೆ: ಮಠ, ಮಂದಿರಗಳ ಮಾಹಿತಿ ಸಂಗ್ರಹಿಸಿದ ಬಿಜೆಪಿ!

Published:
Updated:

ಭೋಪಾಲ್‌: ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಧ್ಯ ಪ್ರದೇಶದ ಆಡಳಿತಾರೂಢ ಬಿಜೆಪಿ ರಾಜ್ಯದಲ್ಲಿರುವ ಮಠ, ಮಂದಿರ, ಸಾಧು, ಸಂತರು ಮತ್ತು ಹಿಂದೂ ಪೂಜಾರಿಗಳ ಸಮಗ್ರ ಮಾಹಿತಿ  ಸಂಗ್ರಹಿಸಿದೆ.

ಇದರೊಂದಿಗೆ ಸಾಮಾಜಿಕ ಕಾರ್ಯಕರ್ತರು, ಹೋರಾಟಗಾರರು, ಸಂಘ, ಸಂಸ್ಥೆಗಳು, ಸಂಘಟನೆಗಳು, ಸ್ಥಳೀಯ ಪ್ರಭಾವಿ ವ್ಯಕ್ತಿಗಳ ಮಾಹಿತಿಯನ್ನೂ ಕಲೆ ಹಾಕಿದೆ.

ಇದನ್ನು ಬಿಜೆಪಿ ಕೂಡ ದೃಢಪಡಿಸಿದ್ದು, ಇದರ ಹಿಂದಿನ ಉದ್ದೇಶ ಮಾತ್ರ ಸ್ಪಷ್ಟವಾಗಿಲ್ಲ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾವಾಗಿ ಸೋಲು ಕಾಣಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದ ಬೆನ್ನಲ್ಲೇ ಬಿಜೆಪಿ ಬೂತ್‌ ಮಟ್ಟದ ಕಾರ್ಯಕರ್ತರನ್ನು ಬಳಸಿಕೊಂಡು ಮಾಹಿತಿ ಸಂಗ್ರಹಿಸಿದೆ.

ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡೇ ಬಿಜೆಪಿ ಈ ಕೆಲಸಕ್ಕೆ ಕೈ ಹಾಕಿದೆ ಎಂದು ಹೇಳಲಾಗುತ್ತಿದೆ. ಆದರೆ, ಪಕ್ಷ ಮಾತ್ರ ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ. 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !