ಗುರುವಾರ , ಫೆಬ್ರವರಿ 27, 2020
19 °C

ಮಧ್ಯ ಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಅಪರಾಧಿಗೆ ಮರಣದಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾತ್ನಾ(ಮಧ್ಯ ಪ್ರದೇಶ): ಮೂರುವರೆ ವರ್ಷದ ಬಾಲಕಿ ಮೇಲೆ ನಡೆದಿದ್ದ ಅತ್ಯಾಚಾರ ಪ್ರಕರಣದ ಅಪರಾಧಿಗೆ (23 ವರ್ಷ) ಇಲ್ಲಿನ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. 

ಜುಲೈ 1 ರಂದು ಈ ಘಟನೆಯು ನಡೆದಿತ್ತು. ಬಾಲಕಿಯನ್ನು ಚಿಕಿತ್ಸೆಗಾಗಿ ದೆಹಲಿಗೆ ಕಳುಹಿಸಿದ್ದು, ಎಐಐಎಂಎಸ್‌ನಲ್ಲಿ ಚಿಕಿತ್ಸೆ ನಡೆಯುತ್ತಿದೆ. 

‘ಅಪರಾಧಿಯು ಬಾಲಕಿ ಕುಟುಂಬದವರಿಗೆ ಪರಿಚಯವಿರುವವನಾಗಿದ್ದು, ಸಂತ್ರಸ್ತೆಯು ಆರೋಪಿಯನ್ನು ವಿಡಿಯೊದಲ್ಲಿ ಗುರುತಿಸಿದ ಮೊದಲ ಪ್ರಕರಣ ಇದಾಗಿದೆ’ ಎಂದು ಜಿಲ್ಲಾ ಕಾನೂನು ಅಧಿಕಾರಿ ಗಣೇಶ್‌ ಪಾಂಡೆ ತಿಳಿಸಿದರು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. 

ಈ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಡಿ.ಕೆ.ಶರ್ಮಾ, ಐಪಿಸಿ ಸೆಕ್ಷನ್‌ 376(ಎಬಿ) ಪ್ರಕಾರ ಮರಣ ದಂಡನೆ ವಿಧಿಸಿದ್ದಾರೆ. 

ಕಳೆದ ಏಳು ತಿಂಗಳಲ್ಲಿ ಮಧ್ಯ ಪ್ರದೇಶದ ಹಲವಾರು ಕೋರ್ಟ್‌ಗಳು ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣಗಳನ್ನು ಒಳಗೊಂಡಂತೆ ಬಹುತೇಕ ಪ್ರಕರಣಗಳಿಗೆ ಮರಣ ದಂಡನೆ ಶಿಕ್ಷೆ ವಿಧಿಸಿವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು