ಕಮಲ್‌ ಹಾಸನ್‌ಗೆ ಷರತುಬದ್ಧ ನಿರೀಕ್ಷಣಾ ಜಾಮೀನು

ಸೋಮವಾರ, ಜೂನ್ 17, 2019
25 °C

ಕಮಲ್‌ ಹಾಸನ್‌ಗೆ ಷರತುಬದ್ಧ ನಿರೀಕ್ಷಣಾ ಜಾಮೀನು

Published:
Updated:
Prajavani

ಮಧುರೈ: ಚುನಾವಣಾ ಪ್ರಚಾರದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಮತ್ತು ಮಕ್ಕಳ ನೀದಿ ಮಯ್ಯಂ ಪಕ್ಷದ ಅಧ್ಯಕ್ಷ ಕಮಲ್‌ಹಾಸನ್‌ಗೆ ಮದ್ರಾಸ್‌ ಹೈಕೋರ್ಟ್‌ ಷರತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. 

ಅರವಕುರಿಚಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿ ಪರ ಮಾಡಿದ ಪ್ರಚಾರ ಭಾಷಣದಲ್ಲಿ ಕಮಲ್‌ಹಾಸನ್‌, ಸ್ವತಂತ್ರ ಭಾರತದ ಮೊದಲ ಉಗ್ರ ಹಿಂದೂ, ಆತ ನಾಥೂರಾಮ್‌ ಗೋಡ್ಸೆ’ ಎಂದು ಹೇಳಿಕೆ ನೀಡಿದ್ದರು. 

ಹಾಸನ್‌ ವಿರುದ್ಧ ಮೇ 14ರಂದು ಎಫ್‌ಐಆರ್‌ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್‌.ಪುಗಳೆಂಧಿ ಅವರನ್ನೊಳಗೊಂಡ ವಿಭಾಗೀಯ ಪೀಠ, ₹10 ಸಾವಿರದ ಬಾಂಡ್‌ ಮತ್ತು ಅಷ್ಟೇ ಮೊತ್ತಕ್ಕೆ ಎರಡು ಶೂರಿಟಿ ನೀಡುವಂತೆ ಆದೇಶಿಸಿದೆ. 

‘ನನ್ನ ಭಾಷಣ ಗೋಡ್ಸೆ ಕೇಂದ್ರಿತವಾಗಿತ್ತೇ ಹೊರತು, ಹಿಂದೂಗಳ ಬಗೆಗಲ್ಲ’ ಎಂದು ಕಮಲ್‌ ಹಾಸನ್‌ ಪ್ರತಿಪಾದಿಸಿದರು. 

ಕಮಲ್‌ ಹಾಸನ್‌ ರಾಜಕೀಯ ಪಕ್ಷದ ನಾಯಕರಾಗಿದ್ದು, ಚುನಾವಣಾ ಪ್ರಕ್ರಿಯೆ ಬಾಕಿ ಇರುವುದರಿಂದ ಅವರಿಗೆ ಜಾಮೀನು ನೀಡಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ. 

ಹಾಸನ್‌ ಹೇಳಿಕೆಗೆ ಬಿಜೆಪಿ, ಎಐಎಡಿಎಂಕೆ ಮತ್ತು ಹಲವು ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. 

 

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !