ಬುಧವಾರ, ಫೆಬ್ರವರಿ 19, 2020
17 °C
ಹಲವೆಡೆ ಪ್ರತಿಭಟನೆ: ಬಸ್‌ಗಳಿಗೆ ಬೆಂಕಿ, ಲಾಠಿ ಪ್ರಹಾರ

ಮೀಸಲಾತಿಗೆ ಒತ್ತಾಯ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಪಿಟಿಐ Updated:

ಅಕ್ಷರ ಗಾತ್ರ : | |

Deccan Herald

ಔರಾಂಗಾಬಾದ್‌/ಪುಣೆ: ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಗೆ ಒತ್ತಾಯಿಸಿ ಮರಾಠ ಸಮುದಾಯ ನಡೆಸುತ್ತಿರುವ ಪ್ರತಿಭಟನೆ ಸೋಮವಾರ ಮತ್ತೆ ತೀವ್ರಗೊಂಡಿದ್ದು, ಮಹಾರಾಷ್ಟ್ರದ ಕೆಲವೆಡೆ ಹಿಂಸಾಚಾರ ಘಟನೆಗಳು ನಡೆದಿವೆ.

ಪುಣೆ ಸಮೀಪದ ಚಕನ್‌ ಪ್ರದೇಶದಲ್ಲಿ ಹಿಂಸಾಚಾರ ನಡೆದ ಬಳಿಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೆಲವು ಸಂಘಟನೆಗಳು ಈ ಪ್ರದೇಶದಲ್ಲಿ ಬಂದ್‌ಗೆ ಕರೆ ನೀಡಿದ್ದವು.

ಪುಣೆಯಿಂದ 40 ಕಿಲೋ ಮೀಟರ್‌ ದೂರದ ಕೈಗಾರಿಕೆ ಪ್ರದೇಶವಾಗಿರುವ ಚಕನ್‌ನಲ್ಲಿ ಕಲ್ಲು ತೂರಾಟ ನಡೆದಿದ್ದು, ಕೆಲವು ಸರ್ಕಾರಿ ಮತ್ತು ಖಾಸಗಿ ಬಸ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಸಂದರ್ಭದಲ್ಲಿ ಪೊಲೀಸರು ಗಾಯಗೊಂಡಿದ್ದಾರೆ.

ಸೊಲ್ಲಾಪುರದಲ್ಲೂ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಬಸ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು.

35 ವರ್ಷದ ವ್ಯಕ್ತಿಯೊಬ್ಬ ಔರಾಂ‌ಗಾಬಾದ್‌ನಲ್ಲಿ ಚಲಿಸುತ್ತಿರುವ ರೈಲಿನ ಮುಂದೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಜೈಸಿಂಗ್‌ ಎಂದು ಈತನನ್ನು ಗುರುತಿಸಲಾಗಿದೆ. ಮೀಸಲಾತಿಗಾಗಿ ಜೀವ ಕೊಡುವುದಾಗಿ ಈತ ಆತ್ಮಹತ್ಯೆಗೆ ಮುನ್ನ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದ. ಈ ಸಂದೇಶವನ್ನು  ವ್ಯಾಟ್ಸ್ ಆಪ್‌ನಲ್ಲೂ ಹಂಚಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು