ವಿದ್ಯುತ್ ಸ್ಪರ್ಶ: ಹುಲಿ ಸಾವು

ನಾಗಪುರ: ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ತಡೋಬಾ ಅಂಧೇರಿ ಹುಲಿ ಸಂರಕ್ಷಿತಾರಣ್ಯದ ಬಳಿಯ ತೋಟವೊಂದರಲ್ಲಿ ವಿದ್ಯುತ್ ಸ್ಪರ್ಶದಿಂದ ಹುಲಿಯೊಂದು ಸಾವನ್ನಪ್ಪಿದೆ.
ಭಾಮ್ದೇಳಿ ಗ್ರಾಮದ ತೋಟದಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದ್ದು, ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ಬೇಲಿ ಸ್ಪರ್ಶಿಸಿ ವಯಸ್ಕ ಹುಲಿ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ನಿಷೇಧಿತ ವಿದ್ಯುತ್ ಬೇಲಿ ಅಳವಡಿಸಿದ ಆರೋಪದಲ್ಲಿ ತೋಟದ ಮಾಲೀಕನನ್ನು ಬಂಧಿಸಲಾಗಿದೆ ಎಂದೂ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.