ಶನಿವಾರ, ನವೆಂಬರ್ 23, 2019
18 °C

‘ಮಹದಾಯಿ ಮಾತುಕತೆ ಇಲ್ಲ’

Published:
Updated:
Prajavani

ಪಣಜಿ: ಮಹದಾಯಿ ಜಲವಿವಾದವನ್ನು ನ್ಯಾಯಾಲಯದ ಹೊರಗೆ ಬಗೆಹರಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಗುರುವಾರ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಬಿಜೆಪಿ ನಾಯಕತ್ವದ ಒತ್ತಡವಿದ್ದರೂ, ಗೋವಾ ಮಾತ್ರ ಸ್ಪಷ್ಟ ನಿಲುವು ಪ್ರದರ್ಶಿಸಿದೆ. 

‘ಕೋರ್ಟ್ ಹೊರಗೆ ಇತ್ಯರ್ಥಪಡಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ನಾವು ನಮ್ಮ ವಾದವನ್ನು ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥವಾಗಿ ಮಂಡಿಸಿದ್ದೇವೆ’ ಎಂದು ಸಾವಂತ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ವಿಚಾರದಲ್ಲಿ ಯಾರೂ ಸಂಪರ್ಕಿಸಿಲ್ಲ. ಮಹದಾಯಿ ವಿಚಾರದಲ್ಲಿ ಸಣ್ಣ ಹೊಂದಾಣಿಕೆಗೂ ನಾವು ಸಿದ್ಧವಿಲ್ಲ’ ಎಂದು ಹೇಳಿದ್ದಾರೆ. 

ಮಾತುಕತೆ ಮೂಲಕ ವಿವಾದ ಇತ್ಯರ್ಥಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಇತ್ತೀಚೆಗೆ ಸಲಹೆ ನೀಡಿದ್ದರು.

ಪ್ರತಿಕ್ರಿಯಿಸಿ (+)