ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾ ಸಂಪುಟ ರಚನೆ ಬೆನ್ನಲ್ಲೇ ಕಾಂಗ್ರೆಸ್‌, ಎನ್‌ಸಿಪಿಯಲ್ಲಿ ಅಸಮಾಧಾನ

ಎನ್‌ಸಿಪಿ ಶಾಸಕ ರಾಜೀನಾಮೆ * ಖರ್ಗೆ ಭೇಟಿಯಾದ ಹಿರಿಯ ‘ಕೈ’ ನಾಯಕರು
Last Updated 31 ಡಿಸೆಂಬರ್ 2019, 12:56 IST
ಅಕ್ಷರ ಗಾತ್ರ

ಮುಂಬೈ:ಮಹಾರಾಷ್ಟ್ರ ಸಚಿವ ಸಂಪುಟ ವಿಸ್ತರಣೆ ಈಗ ಕಾಂಗ್ರೆಸ್‌ನ ಕೆಲವು ಹಿರಿಯ ನಾಯಕರು ಮತ್ತು ಎನ್‌ಸಿಪಿಯ ಕೆಲ ಶಾಸಕರ ಅಸಮಾಧಾನಕ್ಕೆ ಕಾರಣವಾಗಿದೆ.

ಪಕ್ಷದ ನಿಷ್ಠರನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಹಿರಿಯ ನಾಯಕರಾದ ಪೃಥ್ವಿರಾಜ್ ಚವಾಣ್, ನಸೀಮ್ ಖಾನ್, ಪ್ರಣಿತಿ ಶಿಂಧೆ, ಸಂಗ್ರಾಮ್ ತೊಪ್ಟೆ, ಅಮಿನ್ ಪಟೇಲ್ ಮತ್ತು ರೋಹಿದಾಸ್ ಪಾಟೀಲ್ ಮತ್ತಿತರರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಕಾಶ್ ಸೋಲಂಕಿ
ಪ್ರಕಾಶ್ ಸೋಲಂಕಿ

ಈ ಮಧ್ಯೆ, ಬೀಡ್‌ ಜಿಲ್ಲೆಯ ಎನ್‌ಸಿಪಿ ಶಾಸಕ ಪ್ರಕಾಶ್ ಸೋಲಂಕಿ ಸೋಮವಾರ ರಾತ್ರಿಯೇ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ‘ನಾನು ರಾಜಕೀಯ ಮಾಡಲು ಅನರ್ಹ’ ಎಂದು ಅವರು ಹೇಳಿದ್ದಾರೆ. ಸಚಿವ ಸಂಪುಟದಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡು ಅವರು ರಾಜೀನಾಮೆ ನೀಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಸೋಮವಾರ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಎನ್‌ಸಿಪಿಯ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್ ನಾಯಕರಾದ ಅಶೋಕ್ ಚವಾಣ್, ದಿಲೀಪ್ ವಾಲ್ಸೆ–ಪಾಟೀಲ್, ಧನಂಜಯ್ ಮುಂಡೆ, ಸುನಿಲ್ ಛತ್ರಪಾಲ್ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು.ಉದ್ಧವ್‌ ಠಾಕ್ರೆ ಮಗ 29 ವರ್ಷ ವಯಸ್ಸಿನ ಆದಿತ್ಯ ಠಾಕ್ರೆ ಅವರು ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಪ್ರಮಾಣವಚನ ಸ್ವೀಕರಿಸಿದ ಕಾಂಗ್ರೆಸ್ ಸಚಿವರು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ದೆಹಲಿಯಲ್ಲಿ ಮಂಗಳವಾರ ಭೇಟಿ ಮಾಡಿದ್ದಾರೆ. ಈ ವೇಳೆ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಕೆ.ಸಿ.ವೇಣುಗೋಪಾಲ್ ಇದ್ದರು.

ಕಾಂಗ್ರೆಸ್‌ನ ನೂತನ ಸಚಿವರುರಾಹುಲ್ ಗಾಂಧಿ ಭೇಟಿಯಾದರು
ಕಾಂಗ್ರೆಸ್‌ನ ನೂತನ ಸಚಿವರುರಾಹುಲ್ ಗಾಂಧಿ ಭೇಟಿಯಾದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT