ಶುಕ್ರವಾರ, ಮೇ 29, 2020
27 °C

ಮಹಾರಾಷ್ಟ್ರ: ಇಂದು ಉದ್ಧವ್ ಠಾಕ್ರೆ ಸೇರಿ 9 ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೇರಿ 9 ಮಂದಿ ವಿಧಾನ ಪರಿಷತ್ ಸದಸ್ಯರು ಸೋಮವಾರ ಮಧ್ಯಾಹ್ನ 1 ಗಂಟೆಗೆ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮೇ 14ರಂದು ಒಂಬತ್ತು ಜನ ಅಭ್ಯರ್ಥಿಗಳು ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಖಾಲಿಯಿದ್ದ ಒಂಬತ್ತು ಸ್ಥಾನಗಳಿಗೆ ಕೇವಲ ಒಂಬತ್ತು ಜನರು ಮಾತ್ರವೇ ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಮತದಾನದ ಫಲಿತಾಂಶವನ್ನು ಅಂದೇ ಘೋಷಿಸಲಾಯಿತು.

ಶಿವಸೇನೆಯಿಂದ ಠಾಕ್ರೆ ಹೊರತಾಗಿ ನೀಲಂ ಗೊರ್ಹೆ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಬಿಜೆಪಿಯಿಂದ ಗೋಪಿಚಂದ್ ಪಡಲ್ಕರ್, ಪ್ರವಿಣ್ ದಾಟ್ಕೆ, ರಂಜೀತ್‌ಸಿನ್ಹ ಮೋಹಿತ್ ಪಾಟೀಲ್ ಮತ್ತ ರಮೇಶ್ ಕರದ್ ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು