ಭಾನುವಾರ, ಜೂನ್ 7, 2020
27 °C

ಕೋಮುಗಲಭೆ ವಿಡಿಯೋ, ಸಂದೇಶ ರವಾನಿಸುವವರಿಗೆ ಮಹಾ ಸಿಎಂ ಎಚ್ಚರಿಕೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಮಹಾರಾಷ್ಟ್ರ: ಕೋವಿಡ್19 ವೈರಸ್‌ನಂತೆಯೇ ಕೋಮುವಾದದ ವೈರಸ್ ಕೂಡ ಇದೆ, ಕೆಲವರು ತಮಾಷೆಗಾಗಿ ತಪ್ಪು ಸಂದೇಶಗಳು, ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡುವುದು ನಡೆದಿದೆ ಇಂತವರಿಗೆ ಅಂತಿಮ ಎಚ್ಚರಿಕೆ ನೀಡುತ್ತಿದ್ದೇನೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಅವರು, ಕೋವಿಡ್ 19 ಯಾವುದೇ ಜಾತಿ ಧರ್ಮ ನೋಡುವುದಿಲ್ಲ ಎಂದಿದ್ದಾರೆ.

ದೆಹಲಿಯಲ್ಲಿ ನಡೆದ ತಬ್ಲಿಗಿ ಜಮಾತ್ ಕಾರ್ಯಕ್ರಮದಂತೆಯೇ ಮಹಾರಾಷ್ಟ್ರದಲ್ಲಿಯೂ ನಡೆಸಲು ಅನುಮತಿ ನೀಡಲಾಗಿತ್ತು. ಆದರೆ, ದೆಹಲಿಯಲ್ಲಿ ನಡೆದ ಘಟನೆ ನಮ್ಮ ಕಣ್ಣ ಮುಂದೆ ಇರುವುದರಿಂದ ಈ ಕಾರ್ಯಕ್ರಮಕ್ಕೆ ಅನುಮತಿ ರದ್ದುಪಡಿಸಲಾಗಿದೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದಿಂದ ತೆರಳಿದ್ದ ವ್ಯಕ್ತಿಗಳನ್ನು ಸಂಬಂಧಪಟ್ಟ ಸಂಸ್ಥೆಯವರು, ಸಂಘಟಕರು ಪತ್ತೆಹಚ್ಚಿಕೊಡಬೇಕು ಎಂದು ಮುಖ್ಯಮಂತ್ರಿ ಠಾಕ್ರೆ ತಿಳಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು