ಬುಧವಾರ, ಮೇ 27, 2020
27 °C

ಮಹಾ ಕೊರೊನಾ‌: ಉಪಕರಣ ಖರೀದಿಗೆ ಜಿಎಸ್‌‌ಟಿ ವಿನಾಯ್ತಿ ಕೋರಿ ಕೇಂದ್ರಕ್ಕೆ ಪತ್ರ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಮಹಾರಾಷ್ಟ್ರ: ಕೊರೊನಾ ಸೋಂಕು ತಡೆಗಟ್ಟಲು ಚಿಕಿತ್ಸೆ ನೀಡುವ ಉಪಕರಣಗಳು ರಾಜ್ಯಕ್ಕೆ ತುರ್ತು ಅಗತ್ಯವಿದ್ದು ಇವುಗಳಿಗೆ ಜಿಎಸ್‌‌ಟಿಯಿಂದ ವಿನಾಯಿತಿ ನೀಡಬೇಕೆಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ಕೇಂದ್ರ ಹಣಕಾಸು ಸಚಿವರನ್ನು ಒತ್ತಾಯಿಸಿದ್ದಾರೆ.

ಈ ಸಂಬಂಧ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿರುವ ಪವಾರ್ ಕೊರೊನಾ ರಕ್ಷಣಾ ಕವಚಗಳು, ಉಪಕರಣಗಳು, ಮಾಸ್ಕ್, ವೆಂಟಿಲೇಟರ್ ಸೇರಿದಂತೆ ಅನೇಕ ಬಗೆಯ ಉಪಕರಣಗಳ ಅಗತ್ಯವಿದೆ. ಇವುಗಳಿಗೆ ಜಿಎಸ್‌ಟಿಯಿಂದ ವಿನಾಯಿತಿ ನೀಡಬೇಕೆಂದು ಪತ್ರದಲ್ಲಿ ಕೋರಿದ್ದಾರೆ. ಇದಕ್ಕೆ ಉತ್ತರವಾಗಿ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು