ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: ಜುಲೈ 31ರ ವರೆಗೆ ಲಾಕ್‌ಡೌನ್ ವಿಸ್ತರಿಸಿದ ಮಹಾರಾಷ್ಟ್ರ

Last Updated 29 ಜೂನ್ 2020, 11:20 IST
ಅಕ್ಷರ ಗಾತ್ರ

ಮುಂಬೈ: ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಜುಲೈ 31ರ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಿದೆ.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸದ ಮತ್ತು ಅಗತ್ಯವಲ್ಲದ ಚಟುವಟಿಕೆಗಳ ಮೇಲೆ ಸ್ಥಳೀಯವಾಗಿ ನಿರ್ಬಂಧ ವಿಧಿಸಲು ಜಿಲ್ಲಾಧಿಕಾರಿಗಳಿಗೆ ಮತ್ತು ಮಹಾನಗರಪಾಲಿಕೆಗಳ ಆಯುಕ್ತರಿಗೆ ಅಧಿಕಾರ ನೀಡಲಾಗಿದೆ ಎಂದುಬ ಮಹಾರಾಷ್ಟ್ರ ಸರ್ಕಾರ ಹೇಳಿರುವುದಾಗಿ ಎಎನ್‌ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಇದಕ್ಕೂ ಮುನ್ನವೇ, ಥಾಣೆಯಲ್ಲಿ 10 ದಿನಗಳ ಕಾಲ ಲಾಕ್‌ಡೌನ್ ವಿಸ್ತರಿಸಲಾಗಿತ್ತು.

ಕೊರೊನಾದಿಂದ ತತ್ತರಿಸಿರುವ ಮಹಾರಾಷ್ಟ್ರದಲ್ಲಿ ಸೋಮವಾರ ಬೆಳಗ್ಗಿನ ವರೆಗೆ ಒಟ್ಟು 1,64,626 ಪ್ರಕರಣಗಳು ಬೆಳಕಿಗೆ ಬಂದಿದ್ದು, 70,622 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. ಈವರೆಗೆ 86,575 ಮಂದಿ ಗುಣಮುಖರಾಗಿದ್ದು, 7,429 ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT