ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ ಸರ್ಕಾರ ಸ್ಥಿರವಾಗಿದೆ, ಚಿಂತಿಸಬೇಡಿ: ಶಿವಸೇನಾ ನಾಯಕ ಸಂಜಯ್‌ ರಾವತ್‌

Last Updated 26 ಮೇ 2020, 5:59 IST
ಅಕ್ಷರ ಗಾತ್ರ

ಮುಂಬೈ: ಎನ್‌ಸಿಪಿ ನಾಯಕ ಶರದ್ ಪವಾರ್ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ಸಂಜೆ ಭೇಟಿಯಾಗಿ ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ಶಿವಸೇನಾ ನಾಯಕ ಸಂಜಯ್‌ ರಾವತ್‌ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, 'ಶರದ್ ಪವಾರ್ ಮತ್ತು ಸಿಎಂ ಉದ್ಧವ್ ಠಾಕ್ರೆ ಅವರು ಸೋಮವಾರ ಸಂಜೆ ಮಾತೋಶ್ರಿಯಲ್ಲಿ ಭೇಟಿಯಾಗಿದ್ದಾರೆ. ಇಬ್ಬರು ನಾಯಕರು ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಯಾರಾದರೂ ಸರ್ಕಾರದ ಸ್ಥಿರತೆಯ ಬಗ್ಗೆ ಸುದ್ದಿ ಹರಡುತ್ತಿದ್ದರೆ, ಅದು ಅವರ ಹೊಟ್ಟೆಕಿಚ್ಚು ಎಂದು ಪರಿಗಣಿಸಲಾಗುತ್ತದೆ. ಸರ್ಕಾರ ಸ್ಥಿರವಾಗಿದೆ. ಯಾರೂ ಚಿಂತಿಸಬೇಡಿ' ಎಂದು ಸಂಜಯ್ ರಾವತ್‌ ತಿಳಿಸಿದ್ದಾರೆ.

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಹಾಟ್‌ಸ್ಪಾಟ್‌ ಆಗಿರುವ ಮಹಾರಾಷ್ಟ್ರದಲ್ಲಿ ಇದುವರೆಗೆ 52,667 ಪ್ರಕರಣಗಳು ಮತ್ತು 1,695 ಸಾವುಗಳು ವರದಿಯಾಗಿವೆ. ಇದು ಪ್ರತಿಪಕ್ಷ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದು, ಮಹಾರಾಷ್ಟ್ರ ಸರ್ಕಾರದ ವಿರುದ್ಧ ವ್ಯಾಪಕ ಟೀಕಾಪ್ರಹಾರ ನಡೆಸಿದ್ದಾರೆ.

ಬಿಜೆಪಿ ಸಂಸದ ನಾರಾಯಣ್ ರಾಣೆ ಸೋಮವಾರ ಮಹಾರಾಷ್ಟ್ರ ರಾಜ್ಯಪಾಲ ಬಿ. ಎಸ್. ಕೋಶಿಯಾರಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಿವಸೇನಾ ನಾಯಕ ಸಂಜಯ್‌ ರಾವತ್‌ ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT