ಗುರುವಾರ , ಜುಲೈ 7, 2022
20 °C

ಮಹಾರಾಷ್ಟ್ರ, ಹರಿಯಾಣದಲ್ಲಿ ಅ.21ಕ್ಕೆ ಚುನಾವಣೆ, 24ಕ್ಕೆ ಫಲಿತಾಂಶ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಮಹಾರಾಷ್ಟ್ರ ಮತ್ತು ಹರಿಯಾಣ ರಾಜ್ಯಗಳಲ್ಲಿ ಅ.21ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಮತದಾನ ನಡೆದ ಮೂರೇ ದಿನಕ್ಕೆ ಮತಎಣಿಕೆ ಕಾರ್ಯ ಮುಗಿದು, ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಉಮೇದುವಾರಿಕೆ ಸಲ್ಲಿಸಲು ಅ.4 ಕೊನೆಯದಿನ. ನಾಮಪತ್ರ ಹಿಂಪಡೆಯಲು ಅ.7 ಕೊನೆಯದಿನ. ಲೋಕಸಭಾ ಚುನಾವಣೆ ನಂತರ ನಡೆಯುತ್ತಿರುವ ಮೊದಲ ವಿಧಾನಸಭಾ ಚುನಾವಣೆಗಳು ಇವು. ಹರಿಯಾಣ ವಿಧಾನಸಭೆಯ ಅವಧಿ ನ.2ಕ್ಕೆ ಮತ್ತು ಮಹಾರಾಷ್ಟ್ರ ವಿಧಾನಸಭೆಯ ಅವಧಿ ನ.9ಕ್ಕೆ ಕೊನೆಗೊಳ್ಳಲಿದೆ. ಹರಿಯಾಣದಲ್ಲಿ 1.82 ಕೋಟಿ ಮತ್ತು ಮಹಾರಾಷ್ಟ್ರದಲ್ಲಿ 8.9 ಕೋಟಿ ಮತದಾರರು ಇದ್ದಾರೆ.

ಮಹಾರಾಷ್ಟ್ರದಲ್ಲಿ ಅಭ್ಯರ್ಥಿಗಳು ಖರ್ಚು ಮಾಡುವ ಹಣದ ಮೇಲೆ ನಿಗಾ ಇಡಲು ಭಾರತೀಯ ಕಂದಾಯ ಸೇವೆಯ (Indian Revenue Service) ಇಬ್ಬರು ಅಧಿಕಾರಿಗಳನ್ನು ಕಳಿಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಸುನಿಲ್ ಅರೋರ ಹೇಳಿದರು.

ಇದೇ ಸಂದರ್ಭ ಕರ್ನಾಟಕದ 15 ಸ್ಥಾನಗಳೂ ಸೇರಿ, ದೇಶದ ವಿವಿಧ ರಾಜ್ಯಗಳಲ್ಲಿ ಒಟ್ಟು 64 ಸ್ಥಾನಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಘೋಷಿಸಿದರು. ಚುನಾವಣೆಗಳನ್ನು ಕ್ರಮಬದ್ಧವಾಗಿ ನಡೆಸಲು ಎಲ್ಲರೂ ಸಹಕರಿಸಬೇಕು ಎಂದು ಕೋರಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು