ಗುರುವಾರ , ಜನವರಿ 23, 2020
27 °C

ಮಹಾರಾಷ್ಟ್ರ: ಪಾಲ್ಘರ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡಕ್ಕೆ 8 ಬಲಿ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬೋಯ್‌ಸರ್‌ನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 8 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 6 ಜನ ಗಾಯಗೊಂಡಿದ್ದಾರೆ.

ಎಎನ್‌ಕೆ ಫಾರ್ಮಾಗೆ ಸೇರಿದ ನಿರ್ಮಾಣ ಹಂತದ ಘಟಕದಲ್ಲಿ ಶನಿವಾರ ಸಂಜೆ ಸ್ಫೋಟ ಸಂಭವಿಸಿ ಬೆಂಕಿ ಹೊತ್ತಿಕೊಂಡಿತ್ತು.

ಕೆಲವು ರಾಸಾಯನಿಕಗಳ ಪರೀಕ್ಷೆ ನಡೆಸುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ ಸುಮಾರು 15 ಕಿ.ಮೀ ದೂರದವರೆಗೆ ಸದ್ದು ಕೇಳಿಸಿತ್ತು. ಸುತ್ತಲಿನ ಪ್ರದೇಶಗಳ ಹಲವು ಮನೆಗಳ ಕಿಟಿಕಿ ಗಾಜುಗಳು ಪುಡಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಡರಾತ್ರಿವರೆಗೂ ರಕ್ಷಣಾಕಾರ್ಯಾಚರಣೆ ನಡೆದಿತ್ತು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿಯನ್ನೂ ರಕ್ಷಣಾಕಾರ್ಯಾಚರಣೆಗೆ ಕರೆಸಿಕೊಳ್ಳಲಾಗಿತ್ತು.

ಮೃತರ ಕುಟುಂಬದವರಿಗೆ ₹ 5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಘೋಷಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು